ಮೈಸೂರು: ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಮೈಸೂರಿನಲ್ಲಿ ಹಿಂದೂಪರ ಸಂಘಟನೆಗಳು ಚಿಕ್ಕ ಗಡಿಯಾರ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಆದರೆ, ಸರ್ಕಾರ ಮಾತ್ರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಶಾಸಕ ನಾಗೇಂದ್ರ ವಿರುದ್ಧ ಅಸಮಾಧಾನ: ಪ್ರತಿಭಟನೆ ವೇಳೆ ಭಾಷಣ ಮಾಡಲು ಮುಂದಾದ ಶಾಸಕ ನಾಗೇಂದ್ರನ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ಓದಿ: ಹಾಸನ:170ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ನೆಲಸಮ ಮಾಡಿದ ಕಿಡಿಗೇಡಿಗಳು.. ರೈತನಿಗೆ ಶಾಕ್