ETV Bharat / state

ಕ್ರೈಂ ತಡೆಯುವಂತೆ ಚಾಮುಂಡೇಶ್ವರಿ ಬಳಿ ಕೇಳಿಕೊಂಡಿದ್ದೇನೆ: ಆರಗ ಜ್ಞಾನೇಂದ್ರ - I asked Chamundeshwari to stop the crime

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕ್ರೈಂ ಆಗದಂತೆ ಚಾಮುಂಡೇಶ್ವರಿ ಬಳಿ ಕೇಳಿಕೊಂಡಿದ್ದೇನೆ ಎಂದು ಗೃಹ ಮಂತ್ರಿ ಆರಗ ಜ್ಞಾನೇಂದ್ರ ಮೈಸೂರಿನಲ್ಲಿ ತಿಳಿಸಿದರು.

Home Minister Araga Jnanendra visit chamundi hill
ಚಾಮುಂಡೇಶ್ವರಿ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Aug 27, 2021, 8:54 AM IST

ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಡೆಯುವಂತೆ ಚಾಮುಂಡೇಶ್ವರಿ ಬಳಿ ಕೇಳಿಕೊಂಡಿದ್ದೇನೆ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು.

ಗೃಹಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಆರಗ ಜ್ಞಾನೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಗೃಹ‌ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ‌ ದರ್ಶನ ಪಡೆದಿದ್ದೇನೆ. ದೇವರ ದರ್ಶನ ಮಾಡಿ ನನಗೆ ತುಂಬಾ ಸಂತೋಷವಾಗಿದೆ ಎಂದರು.

ಚಾಮುಂಡೇಶ್ವರಿ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ, ನಮ್ಮ ಪೊಲೀಸ್ ಇಲಾಖೆಗೆ ಶಕ್ತಿಕೊಡುವಂತೆ ದೇವಿ ಬಳಿ ಕೇಳಿಕೊಂಡಿದ್ದೇನೆ. ರಾಜ್ಯದ ಜನತೆಗೆ ಒಳ್ಳೆದು ಮಾಡಲಿ, ಒಳ್ಳೆ ಮನಸ್ಸು ಕೊಡಲಿ ಹಾಗೂ ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.