ETV Bharat / state

ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಭೀಕರ ಅಪಘಾತ.. 10 ಮಂದಿ ಸಾವು, ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರಿನ ಕೊಳ್ಳೇಗಾಲದ ಕುರುಬೂರು ಗ್ರಾಮದ ಬಳಿ ಖಾಸಗಿ ಬಸ್​​ ಮತ್ತು ಕಾರ್​​ ನಡುವೆ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

horrific-accident-in-mysuru
ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ, 4ಕ್ಕೂ ಹೆಚ್ಚು ಮಂದಿ ಸಾವು
author img

By

Published : May 29, 2023, 3:35 PM IST

Updated : May 29, 2023, 9:32 PM IST

ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಭೀಕರ ಅಪಘಾತ

ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನ ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ನಡೆದಿದೆ. ಮೃತರೆಲ್ಲರೂ ಬಳ್ಳಾರಿ ಜಿಲ್ಲೆಯವರಾಗಿದ್ದಾರೆ. ಮೂರು ಕುಟುಂಬಗಳ 12 ಸದಸ್ಯರು ಪ್ರವಾಸಕ್ಕೆಂದು ಮೈಸೂರಿಗೆ ಆಗಮಿಸಿದ್ದ ವೇಳೆ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಸಂದೀಪ್ (24), ಅವರ ತಂದೆ ಕೊಟ್ರೇಶ್(45), ತಾಯಿ ಸುಜಾತಾ (40) ಒಂದು ಕುಟುಂಬದವರಾಗಿದ್ದು, ಇನ್ನೊಂದು ಕುಟುಂಬದ ಮಂಜುನಾಥ (35), ಪತ್ನಿ ಪೂರ್ಣಿಮಾ(30), ಮಕ್ಕಳಾದ ಕಾರ್ತಿಕ್ (08), ಪವನ್ (10) ಸಾವನ್ನಪ್ಪಿದ್ದಾರೆ. ಮತ್ತೊಂದು ಕುಟುಂಬದ ಗಾಯತ್ರಿ(35), ಮಗಳು ಶ್ರಾವ್ಯ(3) ಮೃತಪಟ್ಟಿದ್ದಾರೆ. ಹಾಗೆಯೇ ಕಾರು ಚಾಲಕ ಆದಿತ್ಯ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಜನಾರ್ದನ, ಪುನೀತ್ ಮತ್ತು ಸಂಗನಕಲ್ ಶಶಿಕುಮಾರ್ ಎಂಬುವರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಬಳ್ಳಾರಿ ತಾಲೂಕಿನ ಸಂಗನಕಲ್​ ಗ್ರಾಮದವರಾಗಿದ್ದು ಮೇ 27 ರಂದು ಮೂರು ಕುಟುಂಬದವರು ಒಟ್ಟಿಗೆ ಬಳ್ಳಾರಿಯಿಂದ ರೈಲಿನ ಮೂಲಕ ಮೈಸೂರಿಗೆ ಆಗಮಿಸಿದ್ದರು. ಅಲ್ಲಿಂದ ವಾಹನವನ್ನು ಬಾಡಿಗೆಗೆ ಪಡೆದು ಮಲೆ ಮಾದೇಶ್ವರ ದರ್ಶನಕ್ಕೆ ಹೋಗಿ ಮೈಸೂರು ನಗರಕ್ಕೆ ವಾಪಸ್​ ಆಗುತ್ತಿರುವ ವೇಳೆ ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಖಾಸಗಿ ಬಸ್​ಗೆ ಡಿಕ್ಕಿಯಾಗಿ ಈ ದಾರುಣ ಘಟನೆ ಸಂಭವಿಸಿದೆ, ಘಟನೆ ನಡೆದ ಸ್ಥಳಕ್ಕೆ ಟಿ ನರಸಿಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸಂಗನಕಲ್ ಗ್ರಾಮದಲ್ಲಿ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಪರಿಹಾರ ಘೋಷಿಸಿದ ಸಿಎಂ: ಈ ದುರಂತದಲ್ಲಿ ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಟ್ವಿಟರ್​ನಲ್ಲಿ ಟ್ವೀಟ್​​ ಮಾಡಿದ್ದಾರೆ. ನಿನ್ನೆಯಷ್ಟೇ ರಾಜ್ಯಾದ್ಯಂತ ನಡೆದ ವಿವಿಧ ಅಪಘಾತ ಪ್ರಕರಣಗಳಲ್ಲಿ 17 ಜನರು ಪ್ರಾಣ ಕಳೆದುಕೊಂಡಿದ್ದರು.

ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ
ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು- ಕುರುಬೂರು ಶಾಂತಕುಮಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಪಕ್ಕದಲ್ಲಿ ಜಂಗಲ್ ಕಟ್ಟಿಂಗ್​​ ಮಾಡದಿರುವುದರಿಂದ ಎದುರು ಬರುವ ವಾಹನಗಳಿಗೆ ಕಾಣುವುದಿಲ್ಲ, ಆದ್ದರಿಂದ ಇಂತಹ ಭೀಕರ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಇದರ ಹೊಣೆ ಹೊರಬೇಕಾಗುತ್ತದೆ ಅಪಘಾತದಲ್ಲಿ ಮಡಿದ ಎಲ್ಲ ಕುಟುಂಬಕ್ಕೆ ಸರ್ಕಾರ ತಕ್ಷಣವೇ 10 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಎಂದು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಟೈರ್​ ಸ್ಫೋಟಗೊಂಡು ಲಾರಿಗೆ ಗುದ್ದಿದ ಕಾರು: ಸ್ಥಳದಲ್ಲೇ ಆರು ಜನರ ಸಾವು.. ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗದ ಪಿಳ್ಳಂಗಿರಿ ಗ್ರಾಮದಲ್ಲಿ ಅಪಘಾತ: ಬೈಕ್​ಗೆ ಡಿಕ್ಕಿ ಹೊಡೆದು ಬೈಕ್ ಹಿಂಬದಿ ಕುಳಿತಿದ್ದ ಬಾಲಕಿ ಮೇಲೆ ಟಿಪ್ಪರ್ ಹರಿದಿದೆ. ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗದ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕು ಅರಕೆರೆ ಗ್ರಾಮದಿಂದ ಶಿವಮೊಗ್ಗ ನಗರದ ಕಡೆ ಬರುತ್ತಿದ್ದ ಬೈಕ್​ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೊರಟಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಭದ್ರಾವತಿ ತಾಲೂಕು ಅರಕೆರೆ ಗ್ರಾಮದ ಶಿವಪ್ರಕಾಶ್ ಎಂಬುವರು ತಮ್ಮ ಮಗಳು ಐಶ್ವರ್ಯ(15) ರನ್ನು ಶಿವಮೊಗ್ಗದ ಪೆಸೆಟ್ ಪಿಯು ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಟಿಪ್ಪರ್ ಹೊಡೆದಿದೆ. ಇದರಿಂದ ಬಾಲಕಿ ನೆಲಕ್ಕೆ ಬಿದ್ದಿದ್ದಾಳೆ. ಇದೇ ವೇಳೆ ಟಿಪ್ಪರ್ ಹಿಂಬದಿ ಚಕ್ರ ಐಶ್ವರ್ಯ ತಲೆ ಮೇಲೆ ಹರಿದಿದೆ. ಇದರಿಂದ ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಪ್ರಕಾಶ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಟಿಪ್ಪರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Last Updated : May 29, 2023, 9:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.