ETV Bharat / state

ಯಾವ ಕ್ಷೇತ್ರಗಳಿಗೂ ತಾರತಮ್ಯ ಮಾಡುತ್ತಿಲ್ಲ: ಎಸ್.ಟಿ. ಸೋಮಶೇಖರ್

author img

By

Published : May 6, 2021, 9:15 PM IST

ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಸೋಮಶೇಖರ, ಯಾವುದೇ ಕ್ಷೇತ್ರಕ್ಕೂ ಬೇಧ ಭಾವ ಮಾಡುತ್ತಿಲ್ಲ ಎಂದರು.

St somashekar
St somashekar

ಮೈಸೂರು: ಇದುವರೆಗೂ ಮೈಸೂರಿನ 4 ಕ್ಷೇತ್ರಗಳಾದ ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ, ಚಾಮರಾಜ ಕ್ಷೇತ್ರ ಹಾಗೂ ಚಾಮುಂಡಿ ಕ್ಷೇತ್ರದ ಬಗ್ಗೆ ಮಾಹಿತಿ ಪಡೆದಿದ್ದು, ಈ ಎಲ್ಲಾ ಕ್ಷೇತ್ರಕ್ಕೂ ಸಮಾನ ಮಹತ್ವವನ್ನು ಪ್ರಾಮಾಣಿಕವಾಗಿ ನೀಡಲಾಗುತ್ತಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷೇತ್ರಕ್ಕೂ ಬೇಧ ಭಾವ ಮಾಡುತ್ತಿಲ್ಲ ಎಂದರು.

ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸಲು ಯಾರಿಗೂ ಆಗದಂತಹ ಪರಿಸ್ಥಿತಿ ಇಂದು ಬಂದಿದೆ‌. ಹೀಗಾಗಿಯೇ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಖಾಸಗಿ ಆಸ್ಪತ್ರೆಯವರೊಂದಿಗೆ 3 ಬಾರಿ ಸಭೆ ಮಾಡಿ ಅವರಿಗೆ ಸೂಚನೆ ನೀಡಲಾಗಿದ್ದು, ಶೇ 50 ರಷ್ಟು ಬೆಡ್ ನೀಡಬೇಕೆಂದು ಕೇಳಲಾಗಿದೆ ಎಂದರು.

ಮೈಸೂರಿನ ಆಸ್ಪತ್ರೆಗಳಿಗೆ ಕೇವಲ ಮೈಸೂರಿಗರಲ್ಲದೆ ನೆರೆಯ ಜಿಲ್ಲೆಯವರೂ ಸಹ ಬರುತ್ತಿದ್ದಾರೆ. ಬೆಂಗಳೂರು, ಚಾಮರಾಜನಗರ ಸೇರಿದಂತೆ ಇತರೆ ಜಿಲ್ಲೆಯ ಕೋವಿಡ್ ರೋಗಿಗಳು ತುರ್ತು ಪರಿಸ್ಥಿತಿಯಲ್ಲಿ ಬರುವ ಕಾರಣ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಆದಷ್ಟು ಬೇಗ ನಿಲ್ಲಿಸಬೇಕಾಗಿದೆ ಎಂದು ಹೇಳಿದರು.

ಮೈಸೂರು ಜಿಲ್ಲೆಗೆ 48 KL ಆಕ್ಸಿಜನ್ ಬೇಕಾಗಿದೆ‌. ನಿನ್ನೆ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಅವರೇ ಬಂದು ರೀಫಿಲ್ಲಿಂಗ್ ಕಂಪನಿಗಳಿಂದ 350 ಆಕ್ಸಿಜನ್ ಸಿಲಿಂಡರ್ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಜಿಲ್ಲೆಯಲ್ಲಿ ಪ್ರತಿನಿತ್ಯ 2 ರಿಂದ 3 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ನಿಟ್ಟಿನಲ್ಲಿ ನೆರೆಯ ಜಿಲ್ಲೆಗಳಿಗಿಂತ ಮೈಸೂರಿಗೆ ಹೆಚ್ಚಿನ ಆಕ್ಸಿಜನ್ ಅವಶ್ಯಕತೆ ಇದೆ ಎಂದು ತಿಳಿಸಿದರು.

ಇಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವ ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಮೈಸೂರಿಗೆ ಅವಶ್ಯಕತೆ ಇರುವಷ್ಟು ಆಕ್ಸಿಜನ್ ಪಡೆಯಲು ಕ್ರಮ ವಹಿಸಲಾಗಿದೆ ಎಂದರು.

ರೆಮ್ಡಿಸಿವರ್ ಲಸಿಕೆಯನ್ನು ಸಹ ಸರ್ಕಾರದಿಂದ ನೇರವಾಗಿ ಆಸ್ಪತ್ರೆಗಳಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಕಾಳಸಂತೆಯಲ್ಲಿ ಲಸಿಕೆಯನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳು 2 ಸಾವಿರದಿಂದ 3 ಸಾವಿರದವರೆಗೆ ದಾಖಲಾಗುತ್ತಿದೆ. ಈ ಹರಡುವಿಕೆಯನ್ನು ತಡೆಗಟ್ಟಲು ನಗರ ಪಾಲಿಕೆ ಸದಸ್ಯರ ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ರಚಿಸಲು ಚಿಂತನೆ ನಡೆಸಲಾಗುತ್ತಿದೆ. ಆಯಾ ಕ್ಷೇತ್ರದ ಶಾಸಕರನ್ನೇ ಟಾಸ್ಕ್ ಫೋರ್ಸ್‌ನ ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.