ETV Bharat / state

2023ರ ಚುನಾವಣೆಯೇ ನನ್ನ ಕೊನೆಯ ಸ್ಪರ್ಧೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ : ಸಿದ್ದರಾಮಯ್ಯ - Siddaramaiah attended in the Congress Block Committee program in Mysore

ನಾನು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ- ಈ ಬಗ್ಗೆ ನನ್ನನ್ನು ಒತ್ತಾಯಿಸಿಬೇಡಿ- ವಿಪಕ್ಷ ನಾಯಕ ಸಿದ್ದರಾಮಯ್ಯ

i-will-not-contest-from-chamundeshwari-constituency-says-siddaramaiah
ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ ಸ್ಪಷ್ಟೋಕ್ತಿ
author img

By

Published : Jul 17, 2022, 8:56 PM IST

ಮೈಸೂರು : ನಾನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ನನ್ನನ್ನು ಮತ್ತೆ ಒತ್ತಾಯ ಮಾಡಬೇಡಿ. ಇದನ್ನು ಮೊದಲು ತಲೆಯಿಂದ ತೆಗೆದುಹಾಕಿ. ನನ್ನನ್ನು ಖುಷಿಪಡಿಸಲೂ ಹೀಗೆ ಮಾತನಾಡಬೇಡಿ. ''That is very very clear'' ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸುವ ಮೂಲಕ ಬೇರೆ ವಿಧಾನಸಭಾ ಕ್ಷೇತ್ರದತ್ತ ಮುಖಮಾಡಿದ್ದಾರೆ ಎಂಬ ಸುಳಿವನ್ನು ನೀಡಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳಿಗೆ ಹೊಸದಾಗಿ ನೇಮಕಗೊಂಡ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ವರುಣಾ, ಬಾದಾಮಿ, ಕೋಲಾರ, ಹುಣಸೂರು, ಕೊಪ್ಪಳದಲ್ಲಿ ನನ್ನನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಆದರೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂದು ನಾನು ಇನ್ನೂ ತೀರ್ಮಾನ ಮಾಡಿಲ್ಲ. ಈ ಬಳಿಕ ನನಗೆ ಯಾವ ಹುದ್ದೆ ನೀಡಿದರೂ ನಾನು ಸ್ವೀಕರಿಸಲ್ಲ. 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಸ್ಪರ್ಧೆ ಎಂದು ಹೇಳಿದರು.

i-will-not-contest-from-chamundeshwari-constituency-says-siddaramaiah
ಮೈಸೂರಿನಲ್ಲಿ ಕಾಂಗ್ರೆಸ್ ಬ್ಲಾಕ್ ಸಮಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಐದು ಬಾರಿ ಗೆಲ್ಲಿಸಿದ್ದು, ಮೂರು ಬಾರಿ ಸೋಲಿಸಿದ್ದಾರೆ. ಈ ಬಗ್ಗೆ ನನಗೆ ಮತದಾರರ ಮೇಲೆ ಕೋಪ ಇಲ್ಲ. ಕಾರ್ಯಕರ್ತರ ಮೇಲೆಯೇ ಕೋಪ. ಲಿಂಗಾಯತರನ್ನು ಒಡೆದ, ಮೇಲ್ವರ್ಗದವರ ವಿರೋಧಿ, ಸದಾಶಿವ ಆಯೋಗ ಜಾರಿ ಮಾಡಲಿಲ್ಲ ಎಂದು ಬಿಂಬಿಸಿ ನಮ್ಮವರೇ ಅಪಪ್ರಚಾರ ಮಾಡಿದರು ಎಂದು ಹೇಳಿದರು. ನಾನು ಬಾದಾಮಿಗೆ ಎರಡೇ ದಿನ ಹೋಗಿದ್ದು. ಆದರೂ ಅಲ್ಲಿ ನನ್ನನ್ನು ಗೆಲ್ಲಿಸಿದ್ದರು. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಮಾಡಿದಷ್ಟು ಅಭಿವೃದ್ಧಿ ಕೆಲಸ ಬೇರೆ ಯಾರೂ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಕಳೆದ ಮೂರು ತಿಂಗಳುಗಳಿಂದ ಧರಣಿ ಮಾಡುತ್ತಿದ್ದಾರೆ. ಈ ಸರ್ಕಾರ ಮೀಸಲಾತಿ ನೀಡಿದೆಯಾ?. ಇದನ್ನು ಯಾರೂ ಹೇಳಲ್ಲ. ಆದರೆ ನಾನು ಕೊಟ್ಟಷ್ಟು ಕಾರ್ಯಕ್ರಮಗಳನ್ನು ಯಾರೂ ಕೊಟ್ಟಿಲ್ಲ. ನಾನು ಒಂದು ಜಾತಿಗೆ ಸೀಮಿತವಾಗಿ ಕಾರ್ಯಕ್ರಮ ಕೊಡಲಿಲ್ಲ ಎಂದು ಇದೇ ವೇಳೆ ಹೇಳಿದರು.

ಗೊಂದಲದ ಗೂಡಾದ ಚಾಮುಂಡೇಶ್ವರಿ ಸಭೆ : ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಿಂದ ಸ್ಪರ್ಧೆ ಮಾಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮರೀಗೌಡ ಹೇಳಿದಾಗ, ವೇಳೆ ಆಕ್ರೋಶಗೊಂಡ ಕೆಲ ಕಾರ್ಯಕರ್ತರು, ಸಾಹೇಬರನ್ನು ಸೋಲಿಸಿ ಮತ್ತೆ ಏಕೆ ಕರೆಯುತ್ತೀರಾ ಎಂದು ಗರಂ ಆದರು. ಸಿದ್ದರಾಮಯ್ಯ ಸಮ್ಮುಖದಲ್ಲೇ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು.

ಓದಿ : ಕೇಂದ್ರ ಸರ್ಕಾರ ರಾಜಕೀಯವಾಗಿ ಕಾಂಗ್ರೆಸ್​ಗೆ ಕಿರುಕುಳ ನೀಡುತ್ತಿದೆ: ಸಿದ್ದರಾಮಯ್ಯ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.