ETV Bharat / state

ಊಹಾಪೋಹಗಳಿಗೆ ಕಿವಿ ಕೊಡಬೇಡಿ, ಜೆಡಿಎಸ್ ಅಭ್ಯರ್ಥಿಗೆ ನನ್ನ ಮತ​: ಶಾಸಕ ಜಿ ಟಿ ದೇವೇಗೌಡ

author img

By

Published : Jun 9, 2022, 4:36 PM IST

ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತವನ್ನು ಹಾಕುವಂತೆ ಹೆಚ್.​​ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಅಲ್ಲದೇ, ನನ್ನ ಬೆಂಬಲಿಗರು ಹಾಗೂ ಕ್ಷೇತ್ರದ ಮುಖಂಡರ ಅಭಿಪ್ರಾಯವು ಕೂಡ ಅದೇ ಆಗಿದೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ.

i will vote jds candidate says GT Devegowda
ಜೆಡಿಎಸ್ ಅಭ್ಯರ್ಥಿಗೆ ನನ್ನ ಮತ​: ಶಾಸಕ ಜಿಟಿ ದೇವೇಗೌಡ ಸ್ಪಷ್ಟನೆ

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ. ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​ ಶಾಸಕ ಜಿ ಟಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಶಾಸಕ ಜಿ.ಟಿ. ದೇವೇಗೌಡ ಜೆಡಿಎಸ್​​ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಆದ್ದರಿಂದ ನಾಳೆ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಯಾರ ಪರ ಮತ ಹಾಕುತ್ತಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಇದೀಗ ಅವರೇ ಸ್ಪಷ್ಟನೆ ನೀಡಿದ್ದು, ನಾನು ಜೆಡಿಎಸ್​ನಿಂದ ಅಧಿಕೃತವಾಗಿ ಆಯ್ಕೆಯಾಗಿದ್ದೇನೆ. ಹಾಗಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಜೆಡಿಎಸ್​ಗೆ ಮತ ಹಾಕುತ್ತೇನೆ. ಹೆಚ್ ​​​ಡಿ ಕುಮಾರಸ್ವಾಮಿಯವರು ಕೂಡ ನನ್ನ ಬೆಂಬಲವನ್ನು ಕೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತವನ್ನು ಹಾಕುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ನನ್ನ ಬೆಂಬಲಿಗರು ಹಾಗೂ ಕ್ಷೇತ್ರದ ಮುಖಂಡರ ಅಭಿಪ್ರಾಯವು ಕೂಡ ಅದೇ ಆಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: 'ನಾನು ಬಿಜೆಪಿ ನಾಯಕರನ್ನು ಟೀಕಿಸಿದರೆ ನಮ್ಮ ಪಕ್ಷದವರೇ ನನ್ನನ್ನು ಸಮರ್ಥಿಸಿಕೊಳ್ಳುವುದಿಲ್ಲ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.