ETV Bharat / state

ಬಿಜೆಪಿ ನನಗೆ ತಾಯಿ ಇದ್ದಂತೆ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಎಸ್.ಎ.ರಾಮದಾಸ್

author img

By

Published : Apr 18, 2023, 8:23 PM IST

Updated : Apr 18, 2023, 10:04 PM IST

ಬಿಜೆಪಿ ಪಕ್ಷ ಬಿಡುವುದಿಲ್ಲ. ಪಕ್ಷೇತರನಾಗಿ ಸ್ಪರ್ಧೆಯೂ ಮಾಡುವುದಿಲ್ಲ ಎಂದು ಎಸ್.ಎ.ರಾಮದಾಸ್ ಹೇಳಿದರು.

MLA SA Ramdas
ಶಾಸಕ ಎಸ್ ಎ ರಾಮದಾಸ್

ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ .

ಮೈಸೂರು : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಕೆಳಗೆ ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ. ಇಂದು ತಮ್ಮ ವಿದ್ಯಾರಣ್ಯಪುರಂ ಮುಂಭಾಗದ ಪಾರ್ಕ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷ ಬಿಡುವುದಿಲ್ಲ. ಪಕ್ಷೇತರನಾಗಿ ಸ್ಪರ್ಧೆ ಕೂಡ ಮಾಡುವುದಿಲ್ಲ ಎಂದು ತಮ್ಮ ನಿರ್ಧಾರ ಪ್ರಕಟಿಸಿದರು.

ಕೆ.ಆರ್.ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಮದಾಸ್‌ಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡಿಲ್ಲ. ಇವರ ಬದಲಿಗೆ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಟಿ.ಎಸ್.ಶ್ರೀವತ್ಸ ಅವರಿಗೆ ಟಿಕೆಟ್​ ಘೋಷಿಸಿದೆ. ಇದರಿಂದ ಕಳೆದ ಎರಡು ದಿನಗಳಿಂದ ರಾಮದಾಸ್ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಡಿತ್ತು.

ಬಿಜೆಪಿ ನನಗೆ ತಾಯಿ ಇದ್ದಂತೆ: ನನಗೆ ಟಿಕೆಟ್​ ಕೈ ತಪ್ಪಿದ್ದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಯಾರ ಹೆಸರನ್ನೂ ಹೇಳುವುದಿಲ್ಲ. ಶ್ರೀವತ್ಸ ಪರ ಕೆಲಸ ಮಾಡಿ, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಬಿಜೆಪಿ ನನಗೆ ತಾಯಿ ಇದ್ದಂತೆ ಎಂದು ಹೇಳುತ್ತಾ ರಾಮದಾಸ್ ಭಾವುಕರಾದರು.

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ- ಮಾಜಿ ಶಾಸಕ ವಾಸು: ಮೈಸೂರು ನಗರದ ಚಾಮರಾಜ ಕ್ಷೇತ್ರದ ಮತ್ತೊಬ್ಬ ಪ್ರಬಲ ಮುಖಂಡ, ಕಾಂಗ್ರೆಸ್ ಟಿಕೆಟ್​ ಅಕಾಂಕ್ಷಿಯಾಗಿದ್ದ ಮಾಜಿ ಶಾಸಕ ವಾಸು ಅವರಿಗೂ ಟಿಕಟ್​ ಕೈ ತಪ್ಪಿತ್ತು. ಇವರು ಕೂಡಾ ಕಾಂಗ್ರೆಸ್​ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ವಿಚಾರವಾಗಿ ಇಂದು ಮಾಧ್ಯಮಗಳೊಂದಿಗೆ ವಾಸು ಮಾತನಾಡಿದರು.

ಈ ಬಾರಿ ನಾನು ಚಾಮರಾಜ ಕ್ಷೇತ್ರದಿಂದ ಅಭ್ಯರ್ಥಿಯಾಗಲು ಬಯಸಿದ್ದೆ. ಆದರೆ ಟಿಕೆಟ್ ಸಿಗದ ಕಾರಣ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ಕಳೆದ ಎರಡು ದಿನಗಳ ಹಿಂದೆ ಹೇಳಿದ್ದೆ. ನಾನು ಈಗಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ, ಅದರಲ್ಲೇ ಮುಂದುವರಿಯುತ್ತೇನೆ. ಚುನಾವಣೆಯಲ್ಲಿ ಬೇರೆ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಪಕ್ಷೇತರನಾಗಿಯೂ ಸಹ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಆರಗ ಜ್ಞಾನೇಂದ್ರ

Last Updated : Apr 18, 2023, 10:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.