ETV Bharat / state

ನಾನು ಜನರಿಗೋಸ್ಕರ ಕೆಲಸ ಮಾಡುತ್ತೇನೆ, ಕ್ರೆಡಿಟ್​​​ಗಾಗಿ ಅಲ್ಲ: ಸಂಸದೆ ಸುಮಲತಾ ಅಂಬರೀಶ್ - ಮೈಸೂರಿನಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್​​

ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್​​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಜನರಿಗೋಸ್ಕರ ಕೆಲಸ ಮಾಡುತ್ತಿದ್ದು, ಕ್ರೆಡಿಟ್​​​ಗಾಗಿ ಅಲ್ಲ. ಈ ಮಧ್ಯೆ ನಾನು ಮಾಡಿರುವ ಕೆಲಸವನ್ನು ಮಾಡಿಲ್ಲ ಎಂದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಾರೆ.

Sumalatha Ambarish is the MP who spoke in Mysore
ಸಂಸದೆ ಸುಮಲತಾ ಅಂಬರೀಶ್
author img

By

Published : Mar 9, 2022, 4:07 PM IST

ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್​ಗಾಗಿ ಆದ್ಯತೆ ನೀಡಲಾಗುತ್ತಿದೆ. ಆದರೆ ನಾನು ಜನರಿಗೋಸ್ಕರ ಕೆಲಸ ಮಾಡುತ್ತೇನೆ, ಕ್ರೆಡಿಟ್​​ಗಾಗಿ ಅಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇಂದು‌ ಮೈಸೂರಿನ ರೈಲ್ವೆ ಕಚೇರಿಗೆ ಆಗಮಿಸಿ ರೈಲ್ವೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್​​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಜನರಿಗೋಸ್ಕರ ಕೆಲಸ ಮಾಡುತ್ತಿದ್ದು, ಕ್ರೆಡಿಟ್​​​ಗಾಗಿ ಅಲ್ಲ. ಈ ಮಧ್ಯೆ ನಾನು ಮಾಡಿರುವ ಕೆಲಸವನ್ನು ಮಾಡಿಲ್ಲ ಎಂದಾಗ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸವಿಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ನಾನು ಯಾವುದೇ ಕ್ರೆಡಿಟ್ ತೆಗೆದುಕೊಳ್ಳಲು ಕೆಲಸ ಮಾಡುವುದಿಲ್ಲ. ನಿಜ ಹೇಳಲು ಭಯ ಏಕೆ? ಕ್ರೆಡಿಟ್ ವಾರ್ ಅನ್ನ ಯಾರು ಆರಂಭ ಮಾಡಿದ್ದಾರೋ ಅವರು ತಮ್ಮ ಜವಾಬ್ದಾರಿ ಬಗ್ಗೆ ತಿಳಿಯಬೇಕು. ಇನ್ನೊಬ್ಬರ ಕ್ರೆಡಿಟ್​​ನ್ನು ಪಡೆಯಲು ಬರಬಾರದು ಎಂದು ಪರೋಕ್ಷವಾಗಿ ತಮ್ಮ ವಿರುದ್ಧ ವಾಗ್ದಾಳಿ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮುಖಂಡರಿಗೆ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್

ನಾನು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಶಿಂಷಾ ನದಿಗೆ ಸೇತುವೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ನಾನು ಹೋಗಿದ್ದೆ, ಈ ಸಂಬಂಧ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನ ಭೇಟಿ ಮಾಡಿ ಮನವಿ ಸಹ ಮಾಡಿದ್ದೇನೆ. ಆದರೆ ಈ ವಿಚಾರದಲ್ಲಿ ಮಾಜಿ ಪ್ರಧಾನಿಗಳು ಅಥವಾ ಬೇರೆಯವರು ಪತ್ರ ಬರೆದಿರಬಹುದು. ಇದರ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಆದರೆ ನಾನು ಏನೇ ಮಾಡಿದರೂ ಕೆಲವರು ವಿರೋಧ ಮಾಡಲೇಬೇಕೆಂದು ನಿರ್ಧರಿಸಿದ್ದಾರೆ. ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ, ಜನ ನನ್ನ ಪರವಾಗಿ ಮಾತನಾಡುತ್ತಾರೆ ಎಂಬ ಭಯ ಇದೆ ಎಂದರು.

ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ: ನಾನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರಳಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ, ಹಾಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಡಿ ಸ್ಪರ್ಧೆ ಮಾಡುವ ಬಗ್ಗೆ ಯೋಚನೆ ಮಾಡಲು ಇನ್ನೂ ಎರಡೂವರೆ ವರ್ಷ ಇದೆ. ಆಗ ಅದರ ಬಗ್ಗೆ ಯೋಚನೆ ಮಾಡೋಣ ಎಂದು ಹೇಳಿದರು.

ಇದನ್ನೂ ಓದಿ:ಮಾ.12ರಂದು 45 ಲಕ್ಷ ರೈತರ ಮನೆ ಬಾಗಿಲಿಗೆ ಪಹಣಿ, ಜಾತಿ-ಆದಾಯ ಪ್ರಮಾಣಪತ್ರ: ಸಚಿವ ಅಶೋಕ್​

ಉಕ್ರೇನ್ ಹೆಸರಿನಲ್ಲಿ ರಾಜಕೀಯ ಬೇಡ: ಇಲ್ಲಿ ಬಟನ್ ಒತ್ತಿದರೆ ಉಕ್ರೇನ್​ನಲ್ಲಿ ವಿಮಾನ ಇಳಿಯಲು ಸಾಧ್ಯವಿಲ್ಲ. ಉಕ್ರೇನ್​​ನಲ್ಲಿ ಯುದ್ಧ ನಡೆಯುತ್ತಿದೆ. ಈ ಸಂದರ್ಭದಲ್ಲಿ ಭಾರತೀಯರನ್ನ ಸ್ಥಳಾಂತರಿಸುವುದು ತುಂಬಾ ಕಷ್ಟದ ಕೆಲಸ.‌ ಅಲ್ಲಿನ ಪರಿಸ್ಥಿತಿ ಅರ್ಥಮಾಡಿಕೊಂಡು ಮಾತನಾಡಬೇಕು. ಉಕ್ರೇನ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸ ಮಾಡುತ್ತಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳಾಂತರ ತುಂಬಾ ಕಷ್ಟದ ಕೆಲಸ ಎಂದು ಹೇಳಿದರು.

ರಾಜಕೀಯ ಒತ್ತಡದಿಂದ ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳುವುದು ಕಷ್ಟವಾಗಿದೆ. ಆದರೂ ಈ ಒತ್ತಡದ ನಡುವೆ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.