ಮೈಸೂರು: ಹನಿಟ್ರ್ಯಾಪ್ಗೆ ಒಳಗಾದವರು ಭಯಪಡದೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುವುದು ನಡೆಯುತ್ತಲೇ ಇರುತ್ತದೆ ಎಂದು ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ ತಿಳಿಸಿದರು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿರಿಯಾಪಟ್ಟಣದ ವೈದ್ಯರೊಬ್ಬರಿಗೆ ಹನಿಟ್ರ್ಯಾಪ್ ಮೂಲಕ 31.30 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅವರು ಪೊಲೀಸರಿಗೆ ಆಗಲೇ ಮಾಹಿತಿ ನೀಡಿದ್ದರೆ, ಹೀಗೆ ಹಣ ಕಳೆದುಕೊಳ್ಳುತ್ತಿರಲಿಲ್ಲ. ಇಂತಹ ಘಟನೆಗಳಿಗೆ ಹೆದರದೆ ಧೈರ್ಯದಿಂದ ಮಾಹಿತಿ ನೀಡಿ ಎಂದು ಹೇಳಿದರು.
ಪಿರಿಯಾಪಟ್ಟಣ ವೈದ್ಯರ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಯುತ್ತಿದೆ. ಈ ಗ್ಯಾಂಗ್ನಿಂದ ಬ್ಲ್ಯಾಕ್ ಮೇಲ್ ಆದವರು ಪೊಲೀಸರಿಗೆ ಮಾಹಿತಿ ನೀಡಿ ಎಂದು ತಿಳಿಸಿದರು.