ಮೈಸೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿ ವಾಹನವನ್ನು ವಶಪಡಿಸಿಕೊಂಡು ಹಸುಗಳನ್ನ ರಕ್ಷಿಸಿದ್ದಾರೆ.
ಜಿಲ್ಲೆಯ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ತಿಗೂಡು ಗ್ರಾಮದಲ್ಲಿ ಅಕ್ರಮವಾಗಿ ಮೂರು ಹಸು ಮತ್ತು 25 ಕರುಗಳನ್ನು ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಸುಗಳನ್ನು ರಕ್ಷಣೆ ಮಾಡಿ, ಆರೋಪಿಗಳಾದ ರೋಷನ್ ಷರೀಫ್, ಅಹಮದ್ ಹುಸೇನ್ ಎಂಬುವರನ್ನು ಬಂಧಿಸಿದ್ದಾರೆ.
ವಾಹನವನ್ನು ವಶಪಡಿಸಿಕೊಂಡಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.