ಮೈಸೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಕೆ.ಆರ್.ಮಿಲ್ ಕಾಲೋನಿ ಬಳಿ ನಡೆದಿದೆ.
ಬೆಂಗಳೂರು-ಮೈಸೂರು ರಸ್ತೆಯ ಕೆ.ಆರ್. ಮಿಲ್ ಕಾಲೋನಿ ಬಳಿ ಬೊಲೆರೋ ಪಿಕ್ ಅಪ್ ವಾಹನದಲ್ಲಿ ಹಸು -ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಏಕಾಏಕಿ ದಾಳಿ ನಡೆಸಿದ್ದಾರೆ.
ಸಾಗಾಟ ಮಾಡುತ್ತಿದ್ದ ಅಫ್ಸಾನ್ ಖಾನ್ (23), ರುಮಾನ್ ಪಾಷ (22) ಎಂಬುವವರನ್ನು ಬಂಧಿಸಲಾಗಿದೆ. ವಾಹನದಲ್ಲಿದ್ದ 37 ಗೋವುಗಳನ್ನು ರಕ್ಷಣೆ ಮಾಡಿ ಅವುಗಳನ್ನು ಚಾಮುಂಡಿ ಬೆಟ್ಟದ ಬಳಿ ಇರುವ ಪೆಂಜಾರ ಪೋಲ್ ಸೊಸೈಟಿಗೆ ಹಸ್ತಾಂತರಿಸಲಾಗಿದೆ.
ಸಾಗಾಟ ಮಾಡಲು ಬಳಸಿದ ಬೊಲೆರೋ ವಾಹನ ಮತ್ತು ಆರೋಪಿಗಳ ಬಳಿ ಇದ್ದ 4000 ರೂ., 3 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.