ETV Bharat / state

’’ಇಮ್ಮಾವು ರೈತರ ಸಮಸ್ಯೆ ಬಗೆಹರಿಸಿ’’: ಸಚಿವ ಜಗದೀಶ್ ಶೆಟ್ಟರ್​ಗೆ ಮನವಿ - ಇಮ್ಮಾವು ರೈತರ ಸಮಸ್ಯೆ ಬಗೆಹರಿಸುವಂತೆ ಸಚಿವ ಜಗದೀಶ್ ಶೆಟ್ಟರ್ ಗೆ ಮನವಿ

ಕೆಐಡಿಬಿ ಮುಖಾಂತರ ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಇಮ್ಮಾವು ರೈತರು ತಮ್ಮ ಭೂಮಿಯನ್ನು ನೀಡಿದ್ದಾರೆ. ಆದರೆ, ಇದುವರೆಗೂ ಕಂಪನಿ ಉದ್ಯೋಗ ನೀಡಿಲ್ಲ. ಈ ಸಮಸ್ಯೆ ಬಗೆಹರಿಸುವಂತೆ ರೈತರು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಬಳಿ ಮನವಿ ಮಾಡಿದರು.

ಇಮ್ಮಾವು ರೈತರ ಸಮಸ್ಯೆ ಬಗೆಹರಿಸುವಂತೆ ಸಚಿವ ಜಗದೀಶ್ ಶೆಟ್ಟರ್ ಗೆ ಮನವಿ
Immavu farmers appealed to Minister Jagadish Shettar, to solve problem
author img

By

Published : Jan 7, 2021, 12:05 PM IST

ಮೈಸೂರು: ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ ಇಮ್ಮಾವು ರೈತರ ಸಮಸ್ಯೆ ಬಗೆಹರಿಸುವಂತೆ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ರೈತರು ಮನವಿ ಮಾಡಿದರು.

ಸಚಿವ ಜಗದೀಶ್ ಶೆಟ್ಟರ್​ಗೆ ಬಳಿ ಮನವಿ ಮಾಡಿದ ರೈತರು

ನಗರದ ಖಾಸಗಿ ಹೋಟೆಲ್​​​ನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ರೈತರು ಭೇಟಿ ಮಾಡಿದರು. ನಾವು ಕೆಐಡಿಬಿ ಮುಖಾಂತರ ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ್ದೇವೆ‌. ಆದರೆ ಕಂಪನಿ ಇನ್ನೂ ಉದ್ಯೋಗ ಕೊಟ್ಟಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಓದಿ: ಹುಡುಗಿಯರ ಚುಡಾಯಿಸುತ್ತಿದ್ದ ಬೀದಿ ಕಾಮಣ್ಣರಿಗೆ ಬಿತ್ತು ಧರ್ಮದೇಟು!

ಈ ಕುರಿತಂತೆ ಸುಮಾರು 46 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳಾಗಿ, ಅಧಿಕಾರಿಗಳಾಗಲಿ ಅಥವಾ ಕಾರ್ಖಾನೆಯ ಆಡಳಿತ ಮಂಡಳಿ ಆಗಲಿ ಯಾರೂ ಕೂಡ ಸೂಕ್ತ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಚಿವರಿಗೆ ಮನವರಿಕೆ ಮಾಡಿ ಕೊಟ್ಟರು.

ರೈತರ ಸಮಸ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತಂತೆ ಕಾರ್ಖಾನೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.