ETV Bharat / state

'ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜುಲೈ 11ರಂದು ರಾಷ್ಟ್ರೀಯ ಹೆದ್ದಾರಿ ಬಂದ್' - Mysore

ಮೇಕೆದಾಟು ಯೋಜನೆಯನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಹಿಂದೇೆಟು ಹಾಕುತ್ತಿದೆ. ಇದರಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಜು.11 ರಂದು ರಾಮನಗರದ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗುವುದು ಎಂದು ವಾಟಾಳ್‌ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

vatal nagaraj protest
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
author img

By

Published : Jul 7, 2021, 4:36 PM IST

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜುಲೈ 11ರಂದು ರಾಮನಗರದ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್​​ ನಾಗರಾಜ್ ಹೇಳಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ: ವಾಟಾಳ್​​ ನಾಗರಾಜ್​​

ಇಂದು ಮೈಸೂರಿನ ಆರ್‌ ಗೇಟ್ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರ ಕೂಡಲೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು. ಈ ನಡುವೆ ಮುಖ್ಯಮಂತ್ರಿಗಳು ತಮಿಳುನಾಡಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸರಿಯಲ್ಲ. ಯಡಿಯೂರಪ್ಪ ಸರ್ಕಾರಕ್ಕೆ ತಾಕತ್ತಿದ್ದರೆ ಒಂದು ವಾರದೊಳಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಬೇಕು ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

ಇನ್ನು ಎಸ್​​ಎಸ್​​ಎಲ್​​ಸಿ ಪರೀಕ್ಷೆಯನ್ನು ಕೂಡಲೇ ರದ್ದು ಮಾಡಬೇಕು. ಪಿಯುಸಿ ಪರೀಕ್ಷೆಯನ್ನು ಖಾಸಗಿಯಾಗಿ ತೆಗೆದುಕೊಂಡು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

ಇದೇ ವೇಳೆ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಯತ್ನಾಳ್‌ರಿಂದ ಸಾಧ್ಯವಿಲ್ಲ. ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು ಎಂದು ಇದೇ ವೇಳೆ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.