ETV Bharat / state

ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಏಕೀಕೃತ ಟಿಕೆಟ್​​ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರ ಮೂಲಕ ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದಾಗಿದೆ.

combo ticket system for tourists
ಮೈಸೂರು ದಸರಾ
author img

By

Published : Sep 18, 2022, 7:49 PM IST

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ, 5 ಸ್ಥಳಗಳಲ್ಲಿ ಟಿಕೆಟ್​ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ.

ಏಕೀಕೃತ ಟಿಕೆಟ್​​ ವ್ಯವಸ್ಥೆಯು 2022ರ ಸೆಪ್ಟಂಬರ್ 20ರಂದು ಆರಂಭಗೊಂಡು, ಅಕ್ಟೋಬರ್ 05ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಮೈಸೂರು: ಅರಮನೆ ಅಂಗಳದಲ್ಲಿ ಮಾವುತ, ಕಾವಾಡಿಗಳಿಗೆ ಉಪಹಾರ ಕೂಟ

ಏಕೀಕೃತ ಟಿಕೆಟ್​ನನ್ನು ಪ್ರವಾಸಿ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದೆ. ಕೆಎಸ್​ಟಿಡಿಇ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆ ಎಸ್ಆರ್​​ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 02 ಕಡೆ, ಚಾ.ಬೆಟ್ಟ, ಮೃಗಾಲಯ, ಕೆಆರ್​​ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್​ಗಳಲ್ಲಿ ಟಿಕೆಟ್ ಲಭ್ಯವಿರಲಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.