ETV Bharat / state

ಅ.15ಕ್ಕೆ ದಸರಾ ಮಹೋತ್ಸವ ಉದ್ಘಾಟನೆ: ಏಕಮುಖ ಸಂಚಾರ, ನಿರ್ಬಂಧಿಸಿರುವ ರಸ್ತೆಗಳ ಮಾಹಿತಿ ಇಂತಿದೆ - ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ

ಅ.15 ರಂದು ನಾದಬ್ರಹ್ಮ ಡಾ.ಹಂಸಲೇಖ ಅವರು 2023 ರ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ರಸ್ತೆ ಸಂಚಾರದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

dasara
ದಸರಾ ಮಹೋತ್ಸವ
author img

By ETV Bharat Karnataka Team

Published : Oct 13, 2023, 7:13 AM IST

ಮೈಸೂರು : ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಚಾಮುಂಡಿ ಬೆಟ್ಟದಲ್ಲಿರುವ ದೇವಿಯ ಸನ್ನಿಧಿಯಲ್ಲಿ ಅಕ್ಟೋಬರ್ 15 ರಂದು ಬೆಳಗ್ಗೆ 10:15 ರಿಂದ 10.36 ರ ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಿನಿಮಾ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕರಾದ ನಾದಬ್ರಹ್ಮ ಡಾ.ಹಂಸಲೇಖ ಅವರು 2023 ರ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆಯಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ ಜೋಶಿ, ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಜಿ.ಟಿ ದೇವೇಗೌಡ ವಹಿಸಲಿದ್ದು, ಸಮಾರಂಭದ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಮತ್ತು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್ ಸುರೇಶ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಮಹಾ ಪೌರರಾದ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅ. 23 ಮತ್ತು 24 ರಂದು ಹಲವೆಡೆ ಏಕಮುಖ ವಾಹನ ಸಂಚಾರ : ಆಯುಧ ಪೂಜೆ ಹಾಗೂ ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ಹಲವೆಡೆ ಅ.23 ಮತ್ತು 24 ರಂದು ಏಕಮುಖ ವಾಹನ ಸಂಚಾರದ ವ್ಯವಸ್ಥೆ ಮಾಡಲಾಗಿದೆ.

ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್‌ನಿಂದ ರಾಜೇಂದ್ರನಗರ ರಸ್ತೆ, ಶಿವಾಜಿ ರಸ್ತೆ ಮಾರ್ಗವಾಗಿ ಡಾ.ರಾಜಕುಮಾರ್​ ವೃತ್ತದ ವರೆಗೆ: ಅಂಕ್ ರಸ್ತೆಯ ಹಳೆ ಬೆಂಗಳೂರು - ಮೈಸೂರು ರಸ್ತೆ ಮಾರ್ಗವಾಗಿ ಬರುವ ವಾಹನಗಳು ಜಂಕ್ಷನ್​ಲ್ಲಿ ಎಡ ತಿರುವು ಪಡೆದು ಮೌಲಾನಾ ಅಬ್ದುಲ್ ಕಲಾಂ ಆಜಾದ್ ವೃತ್ತ, ರಾಜೇಂದ್ರನಗರ ಮುಖ್ಯ ರಸ್ತೆ, ಡಾ. ರಾಜಕುಮಾರ್​ ವೃತ್ತದವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಸದರಿ ಮಾರ್ಗದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುವ ಎಲ್ಲಾ ವಾಹನಗಳ ಸಂಚಾರವನ್ನು ಅ. 23 ಮತ್ತು ಅ.24 ರಂದು ನಿರ್ಬಂಧಿಸಲಾಗಿದೆ.

ಡಾ. ರಾಜಕುಮಾರ್​ ವೃತ್ತದಿಂದ ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್​ವರೆಗೆ : ಡಾ.ರಾಜಕುಮಾರ್​ ವೃತ್ತದಿಂದ ಬೆಂಗಳೂರು ರಸ್ತೆ ಕಡೆಗೆ ಸಾಗುವ ವಾಹನಗಳಿಗೆ ಅಂಕ್ ರಸ್ತೆ ಜಂಕ್ಷನ್​ವರೆಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಮಾರ್ಗದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುವ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. (ಎಲ್.ಐ.ಸಿ ವೃತ್ತದ ಕಡೆಗೆ ಸಂಚರಿಸುವಂತಿಲ್ಲ).

ಐ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) ದಿಂದ ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್‌ವರೆಗೆ: ಟಿ.ಎನ್.ನರಸಿಂಹಮೂರ್ತಿ ವೃತ್ತದಿಂದ (ಎಲ್.ಐ.ಸಿ ವೃತ್ತ) ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್ ಕಡೆಗೆ ಪೂರ್ವದಿಂದ ಪಶ್ಚಿಮಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಟಿ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) ದಿಂದ ಅಂಕ್ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಅ.24 ರಂದು ವಾಹನಗಳ ಸಂಚಾರವನ್ನು ನಿರ್ಬಂಧಿಸಿರುವ ರಸ್ತೆಗಳು: ಅ.24 ರಂದು ಬೆಳಗ್ಗೆ 6 ರಿಂದ ರಾತ್ರಿ 8ರವರೆಗೆ ದಸರಾ ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗವಾದ ಅರಮನೆಯ ಬಲರಾಮ ದ್ವಾರ, ಆಲ್ಬರ್ಟ್ ವಿಕ್ಟರ್ ರಸ್ತೆ, ಕೆ.ಆರ್​ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಹೈವೇ ವೃತ್ತ, ನೆಲ್ಸನ್ ಮಂಡೇಲಾ ರಸ್ತೆ, ಬನ್ನಿಮಂಟಪದ ಮುಖ್ಯ ದ್ವಾರದವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬನ್ನಿ ಮಂಟಪ ಕವಾಯತು ಮೈದಾನದ ಉತ್ತರ ಭಾಗದ ರಸ್ತೆಯಲ್ಲಿ ಹನುಮಂತನಗರ 3ನೇ ಮುಖ್ಯ ರಸ್ತೆ ಜಂಕ್ಷನ್‌ನಿಂದ ಬೆಂಗಳೂರು ರಸ್ತೆ ಓಲ್ಡ್ ಟೋಲ್ ಗೇಟ್ ಜಂಕ್ಷನ್​ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ನಂಜನಗೂಡು ರಸ್ತೆ, ಟಿ.ನರಸೀಪುರ ರಸ್ತೆ, ಬನ್ನೂರು ರಸ್ತೆ, ಬೆಂಗಳೂರು ರಸ್ತೆ, ಕೆ.ಆರ್​.ಎಸ್ ರಸ್ತೆ, ಹುಣಸೂರು ರಸ್ತೆ, ಬೋಗಾದಿ ರಸ್ತೆ ಮತ್ತು ಹೆಚ್.ಡಿ.ಕೋಟೆ ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಭಾರಿ ಮತ್ತು ಲಘು ಸರಕು ಸಾಗಾಣಿಕೆ ವಾಹನಗಳು ನಗರಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮೈಸೂರು ದಸರಾ: 'ಅಂಬಾರಿ ಡಬಲ್ ಡೆಕ್ಕರ್' ಬಸ್‌ನಲ್ಲಿ ಕುಳಿತು ಆಕರ್ಷಕ ದೀಪಾಲಂಕಾರ ನೋಡಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.