ಮೈಸೂರು: ಪ್ರಚಾರದ ವೇಳೆ ಲಘು ಹೃದಯಘಾತವಾಗಿ ಪಕ್ಷೇತರ ಅಭ್ಯರ್ಥಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹುಣಸೂರು ಉಪ ಚುನಾವಣೆಯಲ್ಲಿ ನಿನ್ನೆ (ನ.28) ಸಂಜೆ ನಡೆದಿದೆ.
ಹುಣಸೂರು ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿ ಉಮೇಶ್ ನಿನ್ನೆ ಸಂಜೆ ಪ್ರಚಾರ ಮಾಡುತ್ತಿದ್ದ ವೇಳೆ ಲಘು ಹೃದಯಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯಕ್ಕೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.