ಮೈಸೂರು: ಒಳ ಉಡುಪಿನಲ್ಲಿ ಅಂಬೇಡ್ಕರ್ ಭಾವಚಿತ್ರ ಎಡಿಟ್ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಫೋಟೋವನ್ನು ತನ್ನ ಫೇಸ್ಬುಕ್ ಖಾತೆಯಿಂದ ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.

ಹುಣಸೂರಿನ ಮಂಜುನಾಥ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಒಳ ಉಡುಪಿನಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟ್ ತಮ್ಮ ಫೇಸ್ಬುಕ್ ಖಾತೆಯಿಂದ ಶೇರ್ ಮಾಡಿದ್ದಾರೆ. ಈ ಕುರಿತು ಮಂಜುನಾಥ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುಟ್ಟರಾಜ ಎಂಬುವವರು ಹುಣಸೂರು ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲು ಮಾಡಿ ಬಂಧಿಸಿದ್ದಾರೆ.