ETV Bharat / state

ಕೆ.ಆರ್.ಆಸ್ಪತ್ರೆಯಲ್ಲಿ 100 ಬೆಡ್‌ಗಳ ಡಯಾಲಿಸಿಸ್ ಸೆಂಟರ್ ತೆರೆಯುವ ಉದ್ದೇಶವಿದೆ: ಪ್ರತಾಪ್​ ಸಿಂಹ

ಕೆ.ಆರ್. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಪ್ರತಾಪ್​ ಸಿಂಹ ಪರಿಶೀಲಿಸಿದರು.

ಸಂಸದ ಪ್ರತಾಪ್​ ಸಿಂಹ
ಸಂಸದ ಪ್ರತಾಪ್​ ಸಿಂಹ
author img

By

Published : Jun 13, 2023, 9:38 PM IST

ಕೆ.ಆರ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರತಾಪ್​ ಸಿಂಹ

ಮೈಸೂರು : ಕೆ.ಆರ್.ಆಸ್ಪತ್ರೆಯಲ್ಲಿ ನೂರು ಬೆಡ್‌ಗಳಿರುವ ಡಯಾಲಿಸಿಸ್ ಸೆಂಟರ್ ಮಾಡಬೇಕೆಂಬುದು ನಮ್ಮ ಉದ್ದೇಶ. ಇದು ನನ್ನ ವೈಯಕ್ತಿಕ ಆಸೆಯೂ ಹೌದು, ಅಗತ್ಯವೂ ಹೌದು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು. ಇಂದು (ಮಂಗಳವಾರ) ಕೆ.ಆರ್.ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಮೈಸೂರಿನ ಆಸ್ಪತ್ರೆಯ ನವೀಕರಣಕ್ಕೆ 89 ಕೋಟಿ ರೂ ಮಂಜೂರು ಮಾಡಿತ್ತು. ಅಲ್ಲದೇ, ಹೊಸ ಎಂಆರ್‌ಐ ಸ್ಕ್ಯಾನಿಂಗ್ ಮಷಿನ್​ ಹಾಕಲು 10 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ಇದರ ಕಾಮಗಾರಿ ವೀಕ್ಷಣೆಗೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆಸ್ಪತ್ರೆಯ ನವೀಕರಣ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ ಈ ಹಿಂದಿನ ಸರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾಗಿದ್ದ ಡಾ.ಕೆ. ಸುಧಾಕರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಆಸ್ಪತ್ರೆಯನ್ನು ನಮ್ಮ ಮೈಸೂರು ಮಹಾರಾಜರು ನಿರ್ಮಾಣ ಮಾಡಿದ್ದು, ಮುಂದಿನ ವರ್ಷ 2024ರ ಜುಲೈ ತಿಂಗಳಿಗೆ ಮೈಸೂರು ಮೆಡಿಕಲ್ ಕಾಲೇಜು ಸ್ಥಾಪನೆಯಾಗಿ 100 ವರ್ಷ ತುಂಬುತ್ತದೆ. ಶತಮಾನೋತ್ಸವ ಸಂದರ್ಭದಲ್ಲಿ ಆಸ್ಪತ್ರೆಯೂ ಕೂಡ ಸಂಪೂರ್ಣವಾಗಿ ನವೀಕರಣಗೊಂಡು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಬೇಕೆಂಬುದು ನಮ್ಮ ಉದ್ದೇಶ. ಈ ಬಗ್ಗೆ ಮೊನ್ನೆ ಜಿಲ್ಲಾ ಪಂಚಾಯತ್​ನಲ್ಲಿ ನಡೆದ ದಿಶಾ ಕಮಿಟಿ ಸಭೆಯಲ್ಲೂ ಚರ್ಚೆ ನಡೆಸಿದ್ದೇನೆ. ಒಂದು ಬಿಲ್ಡಿಂಗ್ ಗುರುತಿಸಿ ಅಲ್ಲಿ ಡಯಾಲಿಸಿಸ್ ಸೆಂಟರ್ ಮಾಡೇ ಮಾಡುತ್ತೇವೆ. ಈಗಾಗಲೇ ಅಧಿಕಾರಿಗಳು ಬಿಲ್ಡಿಂಗ್ ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಗೆ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ ಹಾಗೂ ಪಿಕೆಟಿಬಿ ಆಸ್ಪತ್ರೆಗಳು ಒಳಪಡುತ್ತವೆ. ಈ ಆಸ್ಪತ್ರೆಗಳನ್ನು ಅಂದಾಜು 89 ಕೋಟಿ ರೂಪಾಯಿ ಮೊತ್ತದಡಿ ನವೀಕರಣ ಕಾಮಗಾರಿ ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದೇನೆ. ಆಸ್ಪತ್ರೆಯ ಅಧೀಕ್ಷಕರ ಕಚೇರಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮೊದಲು ಪ್ರತಾಪ್​ ಸಿಂಹ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ಮಾಡಿದರು. ತ್ವರಿತ ಗತಿಯಲ್ಲಿ ಕಾಮಗಾರಿ ಮುಗಿಸಲು ಸೂಚಿಸಿದರು. ಕಾಮಗಾರಿ ಪರಿಶೀಲನೆ ವೇಳೆಯಲ್ಲಿ ಮೈಸೂರು ಮೆಡಿಕಲ್ ಡೀನ್ ಆ್ಯಂಡ್ ಡೈರೆಕ್ಟರ್ ಡಾ. ದಾಕ್ಷಾಯಿಣಿ, ಕೆ.ಆರ್.ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ.ಎನ್.ನಂಜುಂಡಸ್ವಾಮಿ, ಆರ್​ಎಂಒ ಡಾ.ರಾಜೇಶ್ ಕುಮಾರ್, ಪ್ಲಾಸ್ಟಿಕ್ ಸರ್ಜರಿ ಎಚ್​ಒಡಿ ಡಾ. ಮೋಹನ್, ಎಕ್ಸ್ ರೇ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂಜಯ್, ರಕ್ತನಿಧಿ ಕೇಂದ್ರದ ಅಧಿಕಾರಿ ಡಾ. ಮಂಜುನಾಥ್ ಮತ್ತಿತರರು ಇದ್ದರು.

ಇದನ್ನೂ ಓದಿ : ಬಿಜೆಪಿ, ಕಾಂಗ್ರೆಸ್​​ ನಾಯಕರು ಹೊಂದಾಣಿಕೆಯಲ್ಲಿದ್ದೀರಾ: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.