ETV Bharat / state

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣಗೆ ಆಹ್ವಾನ - Dasara's inauguration function

ಮೈಸೂರು ನಗರದ ಮೇಯರ್‌ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ಡಾ. ಸಿ.ಎನ್.ಅಶ್ವತ್ಥ ನಾರಾಯಣ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್,‌ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

ಮೈಸೂರು ದಸರಾ ಮಹೋತ್ಸವ
ಮೈಸೂರು ದಸರಾ ಮಹೋತ್ಸವ
author img

By

Published : Oct 12, 2020, 2:02 PM IST

ಬೆಂಗಳೂರು: ಅಕ್ಟೋಬರ್‌ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.

ಬೆಳಗ್ಗೆ ಮೈಸೂರು ನಗರದ ಮೇಯರ್‌ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಉಪ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ ಡಿಸಿಎಂ, ಕೋವಿಡ್‌ ಸಂಕಷ್ಟದ ಕಾಲದಲ್ಲಿ ನಡೆಯುತ್ತಿರುವ ಈ ವರ್ಷದ ನಾಡಹಬ್ಬವು ಯಾವುದೇ ವಿಘ್ನವಿಲ್ಲದೆ ನಡೆಯಲಿ. ಆ ತಾಯಿ ಚಾಮುಂಡೇಶ್ವರಿ ಕರುಣೆ ಎಲ್ಲರ ಮೇಲೆ ಇರಲಿ ಎಂದು ಶುಭ ಹಾರೈಸಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡಹಬ್ಬಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.‌ಮಂಜುನಾಥ್‌ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್​ ಜೋಷಿ, ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರ ಜತೆಗೆ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.