ETV Bharat / state

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ: ಸಚಿವ ಈಶ್ವರ ಖಂಡ್ರೆ

author img

By

Published : Jul 16, 2023, 1:44 PM IST

ಅರಣ್ಯ ವಾಸಿಗಳಿಗಿರುವ ಸಮಸ್ಯೆಗಳ ಬಗ್ಗೆ ಪರ್ಯಾಲೋಚಿಸಿದ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ನಿವಾರಿಸುವುದಾಗಿ ಭರವಸೆ ನೀಡಿದ್ದಾರೆ.

ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪಾಲ್ಗೊಂಡಿದ್ದ ಸಭೆ

ಮೈಸೂರು: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆ ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಪರ್ಯಾಲೋಚಿಸುವುದಾಗಿ ಭರವಸೆ ಕೊಟ್ಟರು.

ಆನೆ ಹಾವಳಿಗೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ: ಅನಿಲ್ ಚಿಕ್ಕಮಾದು ಅವರು, ತಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ. ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.

ಇದನ್ನೂ ಓದಿ: ಜನಸೇವಾ ಟ್ರಸ್ಟ್​​ಗೆ ಕೊಟ್ಟಿದ್ದ ಭೂಮಿಗೆ ತಡೆ ನೀಡಿದ್ದು ಸೇಡಿನ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಪರಿಶೀಲಿಸಿದ್ದಾಗಿ ತಿಳಿಸಿದ ಸಚಿವರು, ಇದೇ ಸಂದರ್ಭದಲ್ಲಿ ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಿದ್ದಾಗಿ ಹೇಳಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿರುವುದಾಗಿ ಹೇಳಿದರು.

ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿ, 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವವರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಸೂಚಿಸಿದರು.

ಹಿರಿಯ ಐಎಫ್ಎಸ್ ಅಧಿಕಾರಿಗಳಾದ ರಂಗರಾವ್, ಕುಮಾರ್ ಪುಷ್ಕರ್, ರಮೇಶ್ ಕುಮಾರ್, ಹರ್ಷಕುಮಾರ್ ಮತ್ತು ಎಚ್.ಡಿ. ಕೋಟೆಯ ತಹಶೀಲ್ದಾರ್ ಸಭೆಯಲ್ಲಿ ಭಾಗವಹಿಸಿದ್ದರು. ಮಾಜಿ ಶಾಸಕ ಸಂದೇಶ್ ನಾಗರಾಜ್, ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಇದನ್ನೂ ಓದಿ: ಧಾರವಾಡ: 1 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು ₹3 ಲಕ್ಷ ಆದಾಯ ಗಳಿಸಿದ ರೈತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.