ಮೈಸೂರು : ವೈಯಕ್ತಿಕ ಹೇಳಿಕೆಯನ್ನು ಕೊಡುವ ಮುನ್ನ ವೈಚಾರಿಕ ಸಮಸ್ಯೆಗಳ ವಿಚಾರದಲ್ಲಿ ಮಾತನಾಡಬೇಕು. ಅದನ್ನು ಬಿಟ್ಟು ವ್ಯಕ್ತಿಗತವಾಗಿ ಮಾತನಾಡುವುದು ಸರಿಯಲ್ಲ. ಇದನ್ನು ಸರ್ಕಾರ ಗಮನಿಸುತ್ತಿದ್ದು, ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಕೆಆರ್ಎಸ್ ಡ್ಯಾಂ ವಿಚಾರದಲ್ಲಿ ವೈಯಕ್ತಿಕ ಟೀಕೆ ಕುರಿತು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಬಿಜೆಪಿ ಕಾರ್ಯಾಕಾರಣಿ ಸಭೆ ನಡೆಸಲು ಆಗಮಿಸಿದ ಅವರು ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ, ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಣಿ ನಡೆಸಲಾಗುತ್ತಿದೆ. ಮುಂಬರುವ ಜಿಪಂ-ತಾಪಂ ಚುನಾವಣೆಯಲ್ಲಿ ಪಕ್ಷ ಎಲ್ಲಾ ಜಿಲ್ಲೆಗಳಲ್ಲೂ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಪರಿಹಾರ: ಷರತ್ತು ಸಡಿಲಿಕೆ ಬಗ್ಗೆ ಹೈಕೋರ್ಟ್ಗೆ ಮಾಹಿತಿ