ETV Bharat / state

ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಹಗುರ ಮಾತು ಸರಿಯಲ್ಲ: ಸಿಎಂ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

it-is-not-right-to-talk-lightly-about-har-ghar-tiranga-campaign-says-cm-bommai
ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಹಗುರ ಮಾತು ಸರಿಯಲ್ಲ: ಸಿಎಂ ಬೊಮ್ಮಾಯಿ
author img

By

Published : Aug 11, 2022, 4:26 PM IST

ಮೈಸೂರು: ತ್ಯಾಗ, ಬಲಿದಾನ‌, ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿದೆ. ಇದು ಹಿರಿಯರು ನಡೆಸಿದ ಹೋರಾಟದ ಫಲ. ಕಾಂಗ್ರೆಸ್​ನವರು ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಸರಿಯಲ್ಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೇ ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯವಿದ್ದಂತೆ ಎಂದರು.

ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಹಗುರ ಮಾತು ಸರಿಯಲ್ಲ: ಸಿಎಂ ಬೊಮ್ಮಾಯಿ

ಕೀಳು ಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ. ಜನ ಮತ್ತಷ್ಟು ಸ್ಫೂರ್ತಿ, ಪ್ರೇರಣೆಯಿಂದ ಹರ್​ ಘರ್​ ತಿರಂಗ ಅಭಿಯಾನಕ್ಕೆ ಕೈಜೋಡಿಸುತ್ತಿದ್ದಾರೆ. ಸ್ವಾತಂತ್ರ್ಯದ ಬಗ್ಗೆ ಕೆಲವರಿಗೆ ಇತಿಹಾಸ ಗೊತ್ತಿಲ್ಲ. ಕೆಲವರು ಅದನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನದ ಮೂಲಕ ದೇಶದ ಧ್ವಜ ಹಿಡಿದಿರುವುದಕ್ಕೆ ಹೆಮ್ಮೆ ಇದೆ: ನಟ ಯಶ್

ಓಮಿಕ್ರಾನ್ ರೂಪಾಂತರ ತಳಿ ಚೀನಾದಲ್ಲಿ ಪತ್ತೆಯಾಗಿದ್ದು, ಅದರ ಸಂಬಂಧ ಕೇಂದ್ರದಿಂದ ಸೂಚನೆ ಬರುವ ಮುನ್ನವೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ನಿರಂತರವಾಗಿ ಸಂಶೋಧನೆ ನಡೆಯುತ್ತಿದೆ. ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಆತಂಕವಿಲ್ಲ. ಜನರಲ್ಲಿ ಇದರ ಬಗ್ಗೆ ಜಾಗೃತಿಯಿರಲಿ ಎಂದು ಸಿಎಂ ತಿಳಿಸಿದರು.

ಮಳೆಹಾನಿ ಸಂಬಂಧ ಮೊದಲ ಹಂತದಲ್ಲಿ ಪರಿಹಾರ ನೀಡುತ್ತಿದ್ದೇವೆ. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಮಳೆಯಿಂದ ತೊಂದರೆಗೊಳಗಾದ ಎಲ್ಲರಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: 'ಕೈ'ಗೆ ಕೋಲು ಕೊಡುವವರೂ ಇವರೇ: ಕಟೀಲ್ ಬಗ್ಗೆ ಕಾಂಗ್ರೆಸ್ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.