ಮೈಸೂರು: 2023ರ ಸಾರ್ವತ್ರಿಕ ಚುನಾವಣೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.
ನಂಜನಗೂಡು ಪಟ್ಟಣದ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹ ಸ್ವಾಮಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಗೆ 123 ಸದಸ್ಯರು ಬೇಕಾಗಿದ್ದು, ಅದಕ್ಕೆ ಬೇಕಾಗುವ ರೀತಿಯಲ್ಲಿ ರಾಜ್ಯಾದ್ಯಂತ ಅಭ್ಯರ್ಥಿಗಳನ್ನು ಹಾಕಲಾಗುತ್ತದೆ. ಈಗಾಗಲೇ ಕೆಲವೆಡೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಗೊಂದಲವಿರುವ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ ಮಾಜಿ ಶಾಸಕ ಚಿಕ್ಕಣ್ಣ ಅವರಿಗೂ, ನಂಜನಗೂಡಿನಲ್ಲಿ ಸ್ಥಳೀಯ ನಾಯಕರ ಇಚ್ಛೆಯಂತೆ ಬೆಳವಾಡಿ ಶಿವಕುಮಾರ್ ಅವರಿಗೆ ಟಿಕೆಟ್ ನೀಡಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿನೂತನ ರೀತಿಯಲ್ಲಿ ಬಡವರಿಗೆ ಅನುಕೂಲವಾಗುವಂತಹ ಪಂಚರತ್ನ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಜೆಡಿಎಸ್ನ ಮೊದಲ ಪಟ್ಟಿ.. ಇದು ಶಾಶ್ವತ ಪಟ್ಟಿ ಅಲ್ಲ: ಎಚ್ ಡಿ ದೇವೇಗೌಡ