ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ಗೆ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಶನಿವಾರ ರಾತ್ರಿ1.30 ಸುಮಾರಿಗೆ ಕೊನೆಯುಸಿರೆಳೆದರು.
ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.