ಮೈಸೂರು: ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ನಗರದ ಅಪೋಲೊ ಆಸ್ಪತ್ರೆಗೆ ಸೇರಿಸಲಾಗಿದೆ. ರಕ್ತ ಹೆಪ್ಪುಗಟ್ಟಿದ್ದ ಕಾರಣ ಮಧ್ಯರಾತ್ರಿಯೇ ರಾಮದಾಸ್ಗೆ ಅಂಜಿಯೋಪ್ಲಾಸ್ಟ್ ಚಿಕಿತ್ಸೆ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಸದ್ಯ ರಾಮ್ದಾಸ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಹೊರಡಿಸಲಾಗಿದೆ.