ಮೈಸೂರು: ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ (63) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೆ.ಆರ್.ನಗರ ಚುಂಚನಕಟ್ಟೆ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ವಾರದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಇದನ್ನೂ ಓದಿ: WATCH: ಕಣ್ಣ ಮುಂದೆ ಬಾಂಬ್ ದಾಳಿ ನಡೆಯುತ್ತಿದ್ದಂತೆ ವರದಿ ಮಾಡಿದ ಪತ್ರಕರ್ತೆ