ಮೈಸೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆಯನ್ನು ಮೈಸೂರು ವಿಶ್ವವಿದ್ಯಾನಿಲಯವು ಮತ್ತೆ ಮುಂದೂಡಿದೆ.
ಏ.25ರಂದು ನಡೆಯಬೇಕಿದ್ದ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಆದರೆ, ಕೋವಿಡ್-19 ವೈರಸ್ ಹರಡುತ್ತಿರುವ ಕಾರಣ ಹಾಗೂ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕರ್ಫ್ಯೂ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆ ಮುಂದೂಡಲು ನಿರ್ಧರಿಸಲಾಗಿದೆ.
ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ.ಎಚ್.ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.