ಮೈಸೂರು: ಕಬಿನಿ ಜಲಾಶಯ ತುಂಬಿದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ 2ನೇ ಬಾರಿಗೆ ಸಚಿವರ ಜೊತೆ ಬಾಗಿನ ಅರ್ಪಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಣೆಗೂ ಮುನ್ನ ಜಲಾಶಯಕ್ಕೆ ಪೂಜೆ ಸಲ್ಲಿಸುವ ಹಿನ್ನೆಲೆಯಲ್ಲಿ ನಡೆದ ಪೂಜಾ ವಿಧಿ ವಿಧಾನಗಳಲ್ಲಿ ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದರು. ಪೂಜೆ ಮುಗಿದ ನಂತರ ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್ವೈ ಸಚಿವರೊಂದಿಗೆ ಬಾಗಿನ ಅರ್ಪಿಸಿದ್ರು.
ಇದೇ ವೇಳೆ ಮಾತನಾಡಿದ ಅವರು, ಶೀಘ್ರವೇ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆಗಳನ್ನು ರಿಪೇರಿ ಮಾಡಿಸುವುದಾಗಿ ಹೇಳಿದರು.