ಮೈಸೂರು: ಪ್ರಜಾಪ್ರಭುತ್ವದಲ್ಲಿ ಭ್ರಷ್ಟಚಾರ ನಿಗ್ರಹಕ್ಕೆ ಇರುವ ಸಂವಿಧಾನಾತ್ಮಕ ಸಂಸ್ಥೆಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಯಿಂದ, ಸೀಟಿ ಹೊಡೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕರ್ನಾಟಕ ರಾಷ್ಟ್ರೀಯ ಸಮಿತಿ ಕಾರ್ಯಕರ್ತರು, ದೇಶದ ಎಲ್ಲ ಪಕ್ಷಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದ್ದು, ಇದಕ್ಕೆ ರಾಜಕೀಯ ಪಕ್ಷಗಳ ಮುಖಂಡರ ಮೇಲೆ ಪಾರದರ್ಶಕವಾಗಿ ತನಿಖೆ ಮಾಡಲು ಪ್ರಜಾಪ್ರಭುತ್ವದಲ್ಲಿರುವ ಇಡಿ ಮತ್ತು ಸಿಬಿಐಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಆಗ್ರಹಿಸಿ ಸೀಟಿ ಹೊಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಭ್ರಷ್ಟಚಾರ ರಕ್ಷಣೆ ಮಾಡುವ ಪಕ್ಷಗಳಿಗೆ ದಿಕ್ಕಾರ ಹಾಕಿ, ಭ್ರಷ್ಟರಿಗೆ ಶೀಘ್ರವೇ ಶಿಕ್ಷೆ ಕೊಡುವ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.