ETV Bharat / state

ಕೋವಿಡ್ ಹೊಡೆತದಿಂದ ಚೇತರಿಕೆ.. ಕೆಎಸ್‌ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ - ಈಟಿವಿ ಭಾರತ ಕನ್ನಡ

ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಗೆ 31 ಕೋಟಿ ರೂ ಲಾಭ - ಸಚಿವ ನಾರಾಯಣಗೌಡ ಪತ್ರಿಕಾ ಪ್ರಕಟಣೆ - ಕಳೆದ ವರ್ಷಕ್ಕಿಂತ 50 ಕೋಟಿ ರೂ. ವಹಿವಾಟು ಹೆಚ್ಚಳd ಮಾಹಿತಿ

karnataka-silk-industries-corporation-ltd-earned-rs-31-crore-profit-this-year
ಕೋವಿಡ್ ಹೊಡೆತದಿಂದ ಚೇತರಿಕೆ: ಕೆಎಸ್‌ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ
author img

By

Published : Mar 2, 2023, 6:18 PM IST

ಮೈಸೂರು : ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್‌ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ‌. ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ್ಷದಲ್ಲಿ 204.77 ಕೋಟಿ ವಹಿವಾಟು ನಡೆಸಿದ್ದು, 31.64 ಕೋಟಿ ಲಾಭ ಗಳಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ಸುಮಾರು 153.59 ಕೋಟಿ ವಹಿವಾಟು ನಡೆಸಿ 27.72 ಕೋಟಿ ಲಾಭ ಗಳಿಸಿತ್ತು ಎಂದು aವರು ಮಾಹಿತಿ ನೀಡಿದರು.

ಕಳೆದ ವರ್ಷಕ್ಕಿಂತ 50 ಕೋಟಿ ವಹಿವಾಟು ಹೆಚ್ಚಳ : ಮೈಸೂರು ರೇಷ್ಮೆ ಸೀರೆಗೆ ತನ್ನದೇ ಬ್ರಾಂಡ್ ಇದೆ. ಮೈಸೂರು ಸಿಲ್ಕ್‌ಗೆ ದೇಶ ವಿದೇಶಗಳಲ್ಲಿ ಬಹುಬೇಡಿಕೆ ಇದೆ. ಕೆಎಸ್‌ಐಸಿಯಲ್ಲಿ ಹೊಸತನ, ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಪ್ರತಿ ವರ್ಷ ಆದಾಯದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಸುಮಾರು 50 ಕೋಟಿಗೂ ಅಧಿಕ ವಹಿವಾಟು ನಡೆದಿದೆ ಎಂದು ತಿಳಿಸಿದರು.

ನಿಗಮದಲ್ಲಿ ಮತ್ತಷ್ಟು ಸುಧಾರಿತ ಕ್ರಮಗಳು ಕೈಗೊಳ್ಳುವುದು ಹಾಗೂ ಬೇಡಿಕೆ ಆಧಾರಿತ ಡಿಸೈನ್‌ಗಳ ಸೀರೆ ಉತ್ಪಾದನೆಯ ಗುರಿ ಹೊಂದಲಾಗಿದೆ. ಈ ಮೂಲಕ ಕೆಎಸ್‌ಐಸಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ನೀಡಿದ್ದಾರೆ.

ವಿವಿಧ ಸುಧಾರಣಾ ಕ್ರಮ ಅಳವಡಿಕೆ : ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಇ-ತೂಕ, ಇ ಪೇಮೆಂಟ್ ಜಾರಿ ಮಾಡಲಾಗಿದೆ. ಕಚ್ಛಾ ರೇಷ್ಮೆ ಹಾಗೂ ರೇಷ್ಮೆ ನೂಲಿನ ಬೆಲೆಯಲ್ಲಿ ಸ್ಥಿರತೆ ಕಾಪಾಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ‌. ರೇಷ್ಮೆ ಸೀರೆ ಉತ್ಪಾದನೆಯಲ್ಲೂ ಹೊಸ ವಿನ್ಯಾಸ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

ಇನ್ನು, ಮಾರಾಟ ಹೆಚ್ಚಿಸಲು ಕಪಲ್ ಪ್ಯಾಕೇಜ್ ಸೇರಿದಂತೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ‌. ಈ ಮೂಲಕ ರೇಷ್ಮೆ ಇಲಾಖೆ ಹಾಗೂ ಕೆಎಸ್‌ಐಸಿ ನಿಗಮವನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮೈಸೂರು ರೇಷ್ಮೆ​ ಉತ್ಪನ್ನಗಳು ನಾಡಿನ ಹೆಮ್ಮೆ,​ ಶ್ರೇಷ್ಠತೆಯ ಪ್ರತೀಕ: ಜಿಲ್ಲಾಧಿಕಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.