ಮೈಸೂರು: ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ಮಾಡಿರುವ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರ ವರ್ಗಾವಣೆಯ ಹಿಂದಿನ ಕಾರಣ ಏನು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎ. ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಇಂದು ಈ ಟಿವಿ ಭಾರತ್ ಜೊತೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ಅವರು ಆರೋಪ ಮಾಡಿ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಬಳಿಕ ಇಬ್ಬರು ಐ.ಎ.ಎಸ್ ಅಧಿಕಾರಿಗಳನ್ನು ನಿನ್ನೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆ ಇಂದು ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ಭೂ ಮಾಫಿಯಾ ಹಾಗೂ ಮೆಡಿಕಲ್ ಮಾಫಿಯಾ ಕೆಲಸ ಮಾಡಿದೆ ಎಂದು ಆರೋಪಿಸಿದರು.
ಈ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಬೇಕೆಂದು ಆಗ್ರಹಿಸಿದ ಅವರು, ಇದರ ಜೊತೆಗೆ ಮೈಸೂರು, ಕೊಡಗಿನ ಎಲ್ಲ ಯೋಜನೆಗಳು ನನ್ನ ಕಾಲದಲ್ಲೇ ಆಗಿದ್ದು ಎಂದು ಸಂಸದ ಪ್ರತಾಪ್ ಸಿಂಹ ಹಿಂದಿನ ಸರ್ಕಾರದಲ್ಲಿ ಆಗಿರುವ ಯೋಜನೆಗಳನ್ನು ನನ್ನದೆಂದು ಹೇಳಿಕೆ ಕೊಡುವ ಮೂಲಕ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿ ದಿನವೂ ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗುತ್ತಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆ ಹೊರೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.
ಓದಿ: ಬೆಂಗಳೂರಿನಲ್ಲಿ ಕೊರೊನಾ ಇಳಿಕೆ: ನಗರದಲ್ಲಿಂದು 2018 ಜನರಿಗೆ ಪಾಸಿಟಿವ್