ETV Bharat / state

ಹೈಕಮಾಂಡ್​​ಗೆ ಬಿಜೆಪಿಯ 7 ಶಾಸಕರು ಬೆರೆದಿರುವ ದೂರಿನ ಪತ್ರ ಬಿಡುಗಡೆ ಮಾಡಿದ ಕೆಪಿಸಿಸಿ ವಕ್ತಾರ - KPCC spokesperson Release complaint letter

ಬಿಜೆಪಿ ಹೈಕಮಾಂಡ್​​ಗೆ 7 ಶಾಸಕರು ಬರೆದಿದ್ದಾರೆ ಎನ್ನಲಾದ ದೂರಿನ ಪತ್ರವನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಇಂದು ಮೈಸೂರಿನಲ್ಲಿ ಬಿಡುಗಡೆ ಮಾಡಿದರು.

KPCC spokesperson  Release complaint letter
ದೂರು ಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ
author img

By

Published : Aug 26, 2020, 3:14 PM IST

ಮೈಸೂರು: ಬಿಎಸ್​ವೈ ಪುತ್ರ ವಿಜಯೇಂದ್ರ ರಾಜ್ಯದಲ್ಲಿ ತಮ್ಮದೇ ಆದ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ ಎಂದು ದೂರಿ ಬಿಜೆಪಿಯ 7 ಶಾಸಕರು ಹೈಕಮಾಂಡ್​​ಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಿಡುಗಡೆ ಮಾಡಿದ್ದಾರೆ.

ದೂರು ಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ

ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರ ಬಿಡುಗಡೆ ಮಾಡಿದ ಅವರು, ಬಿಜೆಪಿಯ ಹೈಕಮಾಂಡ್​​ಗೆ ಬಿಜೆಪಿಯ 7 ಶಾಸಕರು ಬರೆದ ಪತ್ರದಲ್ಲಿ ಸಿಎಂ ಪುತ್ರ ವಿಜಯೇಂದ್ರ ಪ್ರತಿಯೊಂದು ಇಲಾಖೆಗೂ ಒಬ್ಬೊಬ್ಬರನ್ನು ನೇಮಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ. ಇದರ ಬಗ್ಗೆ ಗಮನಿಸಬೇಕೆಂದು ಹೈಕಮಾಂಡ್​​ಗೆ ಬಿಜೆಪಿ ಶಾಸಕರು ಪತ್ರ ಬರೆದಿದ್ದಾರೆ. ಅಲ್ಲದೆ ವಿಜಯೇಂದ್ರ ಅವರು ಒಂದು ವರ್ಷದಲ್ಲಿ 5,000 ಕೋಟಿ ರೂ. ಹಣವನ್ನು ಸಂಗ್ರಹಿಸಿದ್ದಾರೆ ಎಂಬ ದೂರಿದೆ. ಅದರ ಬಗ್ಗೆ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ದಾಖಲಾತಿಗಳನ್ನು ಸಂಗ್ರಹಿಸಿದ್ದು, ಸೆಪ್ಟೆಂಬರ್ 2 ಅಥವಾ 3ನೇ ವಾರ ವಿಜಯೇಂದ್ರ ನಡೆಸಿರುವ ಭ್ರಷ್ಟಾಚಾರದ ಬಗ್ಗೆ ದೆಹಲಿಯಲ್ಲಿ ದಾಖಲಾತಿಗಳನ್ನು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.