ETV Bharat / state

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಯುಜಿಸಿ ಷರತ್ತು ಉಲ್ಲಂಘಿಸಿದೆ: ಕೆ.ಎಸ್‌‌.ಶಿವರಾಮ್ - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ

ಈಗಲೂ ಮುಕ್ತ ವಿ.ವಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಗಾಳಿಗೆ ತೂರಿದೆ. ನಿಯಮಗಳಿಗೆ ವಿರುದ್ಧವಾಗಿ ಕೋರ್ಸ್ ಗಳನ್ನು ನಡೆಸಲಾಗುತ್ತಿದೆ ಎಂದು ಕೆ.ಎಸ್.ಶಿವರಾಮ್ ಆರೋಪಿಸಿದ್ದಾರೆ.

ks-shivaram-news-conference-in-mysore
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್
author img

By

Published : Jul 2, 2021, 3:49 PM IST

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಮುಕ್ತ ವಿವಿಯ ಮಾನ್ಯತೆ ಮತ್ತೊಮ್ಮೆ ರದ್ದಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಆರೋಪಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೂಡ ಯುಜಿಸಿ ನಿಯಮಗಳನ್ನು ಉಲ್ಲಂಘಿದ ಕಾರಣಕ್ಕೆ ಮುಕ್ತ ವಿವಿ ಮಾನ್ಯತೆ ರದ್ದಾಗಿತ್ತು. ಇದಾದ ಬಳಿಕ ಯುಜಿಸಿಯ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಆದೇಶಿಸಿ ಮಾನ್ಯತೆ ನೀಡಲಾಗಿದೆ ಎಂದರು.

ಆದರೆ, ಈಗಲೂ ಮುಕ್ತ ವಿ.ವಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಗಾಳಿಗೆ ತೂರಿದೆ. ನಿಯಮಗಳಿಗೆ ವಿರುದ್ಧವಾಗಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಮುಕ್ತ ವಿವಿಯಲ್ಲಿ ನಿಯಮ ಬಾಹಿರವಾಗಿ ಪದವಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇದು ರಾಷ್ಟ್ರಮಟ್ಟದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ : ಪಿಎ ಆಗಲಿ, ಯಾರೇ ಆಗಲಿ ತಪ್ಪು ಮಾಡಿದ್ರೆ ಕಾನೂನು ಕ್ರಮ ಆಗಲೇ ಬೇಕು: ಸಿದ್ದರಾಮಯ್ಯ

ಕಳೆದ 2012-13 ನೇ ಸಾಲಿನ ಸುಮಾರು 77 ಸಾವಿರ ವಿದ್ಯಾರ್ಥಿಗಳಿಗೆ ತರಾತುರಿಯಲ್ಲಿ ಪದವಿ ಪ್ರಮಾಣ ಪತ್ರಗಳನ್ನು ಹಂಚುವ ಕೆಲಸಕ್ಕೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಮುಕ್ತ ವಿವಿಯಲ್ಲಿ ಮತ್ತೊಮ್ಮೆ ರಾಷ್ಟ್ರಮಯ ಶೈಕ್ಷಣಿಕ ಮತ್ತು ಆರ್ಥಿಕ ಹಗರಣಗಳು ಮರುಕಳಿಸುವುದನ್ನು ತಡೆಯಲು ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು. ನಿಯಮ ಬಾಹಿರವಾಗಿ ಪದವಿ ಪ್ರಮಾಣಪತ್ರ ವಿತರಿಸುವುದಕ್ಕೆ ತಡೆಯೊಡ್ಡಬೇಕು ಎಂದು ಒತ್ತಾಯಿಸಿದರು.

ಬೆದರಿಕೆ ಕರೆ:

ಮೈಸೂರಿನ ಭೂ ಮಾಫಿಯಾ ಕೈ ಹಾಕಿದ್ದಕ್ಕೆ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮೇಲೆ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.