ETV Bharat / state

ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರು ಗಣ್ಯರಿಗೆ KSOU ಗೌರವ ಡಾಕ್ಟರೇಟ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (ಕೆಎಸ್‌ಒಯು) ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ ಹಾಗೂ ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.

author img

By

Published : Jun 30, 2023, 2:53 PM IST

doctorate
ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ
ಕರ್ನಾಟಕ ರಾಜ್ಯದ ಮುಕ್ತ ವಿವಿಯ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಸುದ್ದಿಗೋಷ್ಠಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಇತರೆ ಇಬ್ಬರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ಈ ಕುರಿತು ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾಹಿತಿ ನೀಡಿದರು.

ಇಂದು ಕೆಎಸ್ಒಯು ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, "ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಶೈಕ್ಷಣಿಕ, ರಾಜಕೀಯ ಹಾಗೂ ಬುಡಕಟ್ಟು ಜನಾಂಗದಿಂದ ಬಂದ ಅಂಶಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಅವರು ಬೆಂಗಳೂರಿಗೆ ಜುಲೈ 3ರಂದು ಆಗಮಿಸಲಿದ್ದಾರೆ. ಆ ಸಂದರ್ಭದಲ್ಲಿ ರಾಜಭವನಕ್ಕೆ ಹೋಗಿ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ರಾಷ್ಟ್ರಪತಿ ಭವನ ಸಂಪರ್ಕಿಸಿ ಮಾಹಿತಿ ನೀಡಲಾಗಿದೆ" ಎಂದು ತಿಳಿಸಿದರು. ಎನ್. ರಾಮಚಂದ್ರಯ್ಯ ಹಾಗೂ ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಹೇಳಿದ ಕುಲಪತಿ, ಇವರ ಸಾಧನೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ : ಕೃವಿವಿ 36ನೇ ಘಟಿಕೋತ್ಸವ: ತುಳಸಿಗೌಡ, ಅಬ್ದುಲ್​ ಖಾದರ್​ ಇಮಾಮ್‍ ಸಾನ್​ ನಡಕಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ

ಘಟಿಕೋತ್ಸವ ವಿವರ : ಕರ್ನಾಟಕ ರಾಜ್ಯ ಮುಕ್ತ ವಿವಿಯ 18ನೇ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್, ಒಬ್ಬರಿಗೆ ಪಿಹೆಚ್​ಡಿ ಹಾಗೂ 8,722 ವಿದ್ಯಾರ್ಥಿಗಳಿಗೆ ಪದವಿ ಪತ್ರ ವಿತರಿಸಲಾಗುವುದು. ಇದರಲ್ಲಿ 5,241 ಮಹಿಳೆಯರು ಹಾಗೂ 3,481 ಪುರುಷರು ಪದವಿ ಪಡೆಯಲಿದೆ. ಇದರಲ್ಲಿ 44 ಚಿನ್ನದ ಪದಕಗಳು ಹಾಗೂ 27 ನಗದು ಬಹುಮಾನ ಪಡೆಯಲಿದ್ದಾರೆ.

ತುಳಸಿ ಗೌಡರಿಗೆ ಡಾಕ್ಟರೇಟ್ : ವೃಕ್ಷಮಾತೆ ಹಾಗೂ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಯನ್ನು ಜೂನ್​ 10ರಂದು ಘೋಷಣೆ ಮಾಡಿತ್ತು. ಅಂಕೋಲ ತಾಲೂಕಿನ ಹೊನ್ನಳ್ಳಿಯ ಹಾಲಕ್ಕಿ ಸಮುದಾಯದ ತುಳಸಿ ಗೌಡರು ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಪರಿಗಣಿಸಿ ಕೃಷಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ವಿಶ್ವಶಾಂತಿ ಕೃಷಿ ಸಂಶೋಧನಾ ಕೇಂದ್ರದ ಸಂಸ್ಥಾಪಕ ಪದ್ಮಶ್ರೀ ಪುರಸ್ಕೃತ ಅಬ್ದುಲ್​ ಖಾದರ್​ ಇಮಾಮ್‍ ಸಾಬ್​ ನಡಕಟ್ಟಿನ ಅವರಿಗೂ ರಾಜ್ಯಪಾಲರು ಮತ್ತು ಕೃಷಿ ವಿವಿಯ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದರು.

ಇದನ್ನೂ ಓದಿ : Tulsi Gowda : ಧಾರವಾಡದ ಕೃಷಿ ವಿವಿಯಿಂದ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡಗೆ ಡಾಕ್ಟರೇಟ್ ಪದವಿ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.