ETV Bharat / state

ಕುಮಾರಸ್ವಾಮಿ, ದೇವೇಗೌಡರು ಯಾವುದೇ ಸರ್ಕಾರ ಬೀಳಿಸಿಲ್ಲ: ಶಾಸಕ ಜಿ ಟಿ ದೇವೇಗೌಡ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಸರ್ಕಾರಕ್ಕೆ ಹೆಚ್​ ಡಿ ದೇವೇಗೌಡರು ಮಾರ್ಗದರ್ಶನ ಮಾಡಿದರೆ, ಹೆಚ್ .ಡಿ ಕುಮಾರಸ್ವಾಮಿ ಸರ್ಕಾರ ಮಾಡುವಂತ ತಪ್ಪನ್ನು ಎತ್ತಿ ಹಿಡಿದು ಹೋರಾಟ ಮಾಡಿ ಎಚ್ಚರಿಕೆ ಕೊಡುವಂತ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ಶಾಸಕ ಜಿ ಟಿ.ದೇವೇಗೌಡ
ಶಾಸಕ ಜಿ ಟಿ.ದೇವೇಗೌಡ
author img

By

Published : Jul 31, 2023, 3:30 PM IST

ಶಾಸಕ ಜಿ ಟಿ.ದೇವೇಗೌಡ ಹೇಳಿಕೆ

ಮೈಸೂರು : ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾವುದೇ ಸರ್ಕಾರವನ್ನು ಬೀಳಿಸಿಲ್ಲ, ಬೀಳಿಸಲೂ ಹೋಗಲ್ಲ. ಸರ್ಕಾರ ಹಳಿ ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿಕೆ ನೀಡಿದರು. ಇಂದು ತಮ್ಮ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರಿನ ಬೋಗಾದಿ ಪಟ್ಟಣ ಪಂಚಾಯಿತಿಯ ಬಳಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಬೊಗಾದಿ ಪಟ್ಟಣ ಪಂಚಾಯಿತಿಗೆ ಅನುಭವವುಳ್ಳ ಉತ್ತಮ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಮನವಿ ಮಾಡಿದ್ದೆ, ಆದರೆ ಸರ್ಕಾರ ಶಾಸಕರ ಮನವಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಸಂಪೂರ್ಣ ಮಾಹಿತಿ ಇದೆ. ಬೆಂಗಳೂರಿನಲ್ಲಿ ರೆವಿನ್ಯೂ ಸ್ಥಳಕ್ಕೆ ಖಾತೆ ಮಾಡಿಕೊಡಲಾಗುತ್ತಿದೆ. ಆದರೆ ಇಲ್ಲಿ ಆ ವ್ಯವಸ್ಥೆ ಇಲ್ಲ. ಮೈಸೂರಿನಲ್ಲೂ ಸಹ ರೆವಿನ್ಯೂ ಸ್ಥಳಗಳಿಗೆ ಖಾತೆ ಮಾಡಿಸಿಕೊಡಬೇಕು. ಇನ್ನು ಸರ್ಕಾರವನ್ನು ಹೆಚ್​ ಡಿ ಕುಮಾರಸ್ವಾಮಿ ಮತ್ತು ಹೆಚ್​ ಡಿ ದೇವೇಗೌಡರು ಯಾವುದೇ ಕಾರಣಕ್ಕೂ ಸರ್ಕಾರವನ್ನು ಬೀಳಿಸುವುದಿಲ್ಲ. ಹಿಂದೆಯೂ ಬೀಳಿಸಿಲ್ಲ, ಮುಂದೆಯೂ ಸರ್ಕಾರವನ್ನು ಬೀಳಿಸುವುದಕ್ಕೆ ಹೋಗುವುದಿಲ್ಲ. ಸರ್ಕಾರ ಹಳಿ ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ. ಅದನ್ನೇ ಮುಂದುವರೆಸುತ್ತಾರೆ. ಕುಮಾರಸ್ವಾಮಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಜಿ ಟಿ ದೇವೇಗೌಡ ಹೇಳಿದರು.

ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ ಇದೆ : ಸರ್ಕಾರದ ವಿರುದ್ಧ ಸ್ವತಃ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ ಇದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ 30ಕ್ಕೂ ಹೆಚ್ಚು ಶಾಸಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಆದಾಯ ಕ್ರೋಢೀಕರಣ ಮಾಡಲು ಯಾವುದೇ ಸಮಸ್ಯೆ ಇಲ್ಲ. ಯಾವುದಾದರೂ ಮೂಲಗಳಿಂದ ಹಣ ಕ್ರೋಢೀಕರಿಸಬಹದು. ಗ್ಯಾರಂಟಿ ಯೋಜನೆಗಳ ಬಗ್ಗೆ ನನಗೂ ಮೆಚ್ಚುಗೆ ಇದೆ. ಆದರೆ ಶಾಸಕರಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅನುದಾನ ನೀಡುತ್ತಿಲ್ಲ. ಇದರಿಂದ ಕಳೆದ ತಿಂಗಳಿನಿಂದ ಬಿಲ್​ ಆಗುವುದಿಲ್ಲ ಎಂಬ ಆತಂಕದಿಂದ ಕಂಟ್ರಾಕ್ಟರ್​ಗಳು ಕೆಲಸ ನಿಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಾದರೂ ಅನುದಾನ ಕೊಡುವ ವಿಶ್ವಾಸ ಇದೆ. ಈ ಬಗ್ಗೆ ಕಾದು ನೋಡಬೇಕು ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ದಸರಾ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸುತ್ತೇನೆ : ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ದಸರಾ ಉನ್ನತ ಮಟ್ಟದ ಸಭೆಯಲ್ಲಿ ನಾನು ಭಾಗಿಯಾಗುತ್ತೇನೆ. ಮೈಸೂರು, ಚಾಮರಾಜನಗರ, ಮಂಡ್ಯ ಭಾಗದ ಶಾಸಕರು ಭಾಗಿಯಾಗುತ್ತಾರೆ. ಈ ಬಾರಿ ಮೈಸೂರು ಭಾಗ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು, ಸರ್ಕಾರ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು ಸಲಹೆ ನೀಡುತ್ತೇವೆ‌. ನಾಡಿಗೆ ಒಳಿತಾಗಲಿ ಎಂದು ಅದ್ಧೂರಿ ದಸರಾ ಆಚರಣೆ ಮಾಡಿ, ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡೋಣ ಎಂದು ಜಿಟಿಡಿ ತಿಳಿಸಿದರು.

ಇದನ್ನೂ ಓದಿ : ಈ ವರ್ಷ ವಿಶ್ವ ಪ್ರಸಿದ್ದ ಮೈಸೂರು ದಸರಾ ಅದ್ದೂರಿ ಆಚರಣೆ: ಸಚಿವ ಮಹಾದೇವಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.