ಮೈಸೂರು: ಮಂಗಳೂರು ಬಾಂಬ್ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಘನತೆ ಮರೆತು ಬೇಜವಾಬ್ದಾರಿಯಿಂದ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಮೈಸೂರಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸಮಾಜದ ಬಗ್ಗೆ ಕಳಕಳಿ ಇದೆ. ಇದನ್ನು ಕುಮಾರಸ್ವಾಮಿ ಅವರು ಮಾತನಾಡಬಾರದು. ಬಾಂಬ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.ಅದರ ಬಗ್ಗೆ ಸೂಕ್ತ ವರದಿ ಬರಲಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದ ಅವರು, ಹಳೆ ಮೈಸೂರು ಭಾಗದಲ್ಲಿಯೂ ಬಿಜೆಪಿ ವಿಸ್ತರಣೆಯಾಗುತ್ತಿದೆ. ಉತ್ತರ ಕರ್ನಾಟಕದಂತೆ ಬಿಜೆಪಿ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಸ್ತರಣೆಯಾಗಲಿದೆ. ಪಕ್ಷಕ್ಕಾಗಿ ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದಾರೆ ಎಂದರು.