ETV Bharat / state

ಮಳೆ ಕೊರತೆ.. ರೈತರು ಹೆಚ್ಚು ನೀರು ಬೇಕಾಗುವ ಬೆಳೆ ಬೆಳೆಯಬಾರದು: ಸಚಿವ ಕೃಷ್ಣ ಬೈರೇಗೌಡ - ಕಂದಾಯ ಇಲಾಖೆ

ಭೂಮಿ ತಂತ್ರಾಂಶದಲ್ಲಿ ಬರುವ ಕಡತಗಳನ್ನು 15 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಮೈಸೂರು ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಸಕಾಲದಲ್ಲಿ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ವಿಳಂಬಕ್ಕೆ ಕಾರಣವಾದ ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

Revenue Minister Krishna Byre Gowda spoke.
ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದರು.
author img

By

Published : Aug 8, 2023, 6:31 PM IST

ಮೈಸೂರು:‌ ಸಾರ್ವಜನಿಕರು ವಿವಿಧ ಕೆಲಸ, ಸೌಲಭ್ಯಗಳಿಗೆ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸುವರು. ಆ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಅನಗತ್ಯ ವಿಳಂಬ ಮಾಡಬಾರದು. ಆಡಳಿತ ವರ್ಗ ಜನಸ್ನೇಹಿ ಆಡಳಿತ ನೀಡಬೇಕು. ಕಂದಾಯ ಆಡಳಿತ ವರ್ಗ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆ ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವ ಇಲಾಖೆ. ಜನಪರ ಆಡಳಿತ ನೀಡುವುದು ಮಾತೃ ಇಲಾಖೆ ಕಂದಾಯ ಇಲಾಖೆಯಿಂದ ಆರಂಭವಾಗಬೇಕು. ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ 30% ರಷ್ಟು ಮಳೆ ಕೊರತೆ ಆಗಿದೆ. ಮುಂದೆಯೂ ಮಳೆ ಕಡಿಮೆ ಆಗುವ ಸಾಧ್ಯತೆ ಇರುವುದರಿಂದ ರೈತರು ಹೆಚ್ಚು ನೀರು ಬೇಕಾಗುವ ಬೆಳೆಗಳನ್ನು ಬೆಳೆಯಬಾರದು ಎಂದು ಸಲಹೆ ನೀಡಿದರು.

ವಿಪತ್ತು ನಿರ್ವಹಣೆ ಪರಿಹಾರದಲ್ಲಿ ಅಕ್ರಮ: ಮಳೆಯಿoದ ಮಾನವ ಜೀವ ಹಾನಿ ಆಗಿದ್ದು, ಮುಂದೆ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಪಾಯದ ಸ್ಥಳದಲ್ಲಿ ಇರುವವರನ್ನು ಬೇರೆಡೆಗೆ ಶಿಫ್ಟ್​ ಮಾಡಿ ಪ್ರಾಣ ಹಾನಿ ಆಗದಂತೆ ತಡೆಗಟ್ಟಬೇಕು. ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಕಾಲು ಸಂಕಗಳು ಹಾಗೂ ವೆಂಟೆಡ್ ಡ್ಯಾಮ್‌ಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಪತ್ತು ನಿರ್ವಹಣೆ ಪರಿಹಾರದಲ್ಲಿ ಅಕ್ರಮ ಆಗುತ್ತಿದ್ದು, ಅನರ್ಹರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬರ, ಪ್ರವಾಹ ಹಾಗೂ ಕೋವಿಡ್‌ಗೆ ಸಂಬಂಧಿಸಿದಂತೆ ಕ್ಯಾಲಾಮಿಟಿ ಫಂಡ್‌ನಲ್ಲಿ ಕೈಗೊಂಡಿರುವ ಕಾಮಗಾರಿಗಳು 4 ವರ್ಷಗಳಿಂದ ಬಾಕಿ ಉಳಿದಿವೆ. ಇದರಲ್ಲಿ ಬಾಕಿ ಇರುವುದಕ್ಕೆ ಗರಂ ಆದ ಸಚಿವರು, ಅದೇ ವರ್ಷದಲ್ಲಿ ಕಾಮಗಾರಿಗಳು ಮುಗಿಯಬೇಕು ಎಂದು ತಾಕೀತು ಮಾಡಿದರು.

ಭೂಮಿ ತಂತ್ರಾಂಶದಲ್ಲಿ ಬರುವ ಕಡತಗಳನ್ನು 15 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಮೈಸೂರು ವಿಭಾಗದ ಎಲ್ಲ ಜಿಲ್ಲೆಗಳಲ್ಲಿಯೂ ಸಕಾಲದಲ್ಲಿ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ವಿಳಂಬಕ್ಕೆ ಕಾರಣವಾದ ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ಮಾಡಿದರು.

ತಹಶೀಲ್ದಾರ್‌ಗಳು, ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ತಮ್ಮ ಹಂತದಲ್ಲಿ ಇರುವ ಕೋರ್ಟ್ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳಬಾರದು. ವಾರದಲ್ಲಿ 2 ದಿನ ವಿಚಾರಣೆ ನಡೆಸಿ, ಆದ್ಯತೆಯ ಮೇಲೆ ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮಾತನಾಡಿ, ಪದೇ ಪದೆ ಪ್ರವಾಹ ಬಂದು ಅಪಾಯ ಉಂಟಾಗುವ ಊರುಗಳನ್ನು ಶಾಶ್ವತವಾಗಿ ಶಿಫ್ಟ್ ಮಾಡಿ ಪುನರ್ವಸತಿ ಕಲ್ಪಿಸುವ ಕ್ರಮವನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು. ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸಕಾಲದಲ್ಲಿ ಆಗಬೇಕು ಎಂದು ತಿಳಿಸಿದರು.

ವಾಡಿಕೆಗಿಂತ ಕಡಿಮೆ ಮಳೆ: ಕಂದಾಯ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಮಾತನಾಡಿ, ಇಲ್ಲಿಯವರೆಗೆ ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಆಗುವ ಮಾಹಿತಿ ಇದೆ. ಮಳೆ ಅನಾಹುತಗಳಿಗೆ ಎಸ್.ಡಿ.ಆರ್.ಎಫ್ ಅನುದಾನದಲ್ಲಿ ಪರಿಹಾರಗಳನ್ನು ವಿತರಣೆ ಮಾಡಬೇಕು. ಪಿಡಿ ಅಕೌಂಟ್‌ನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ರಾಗಿ ಜೋಳ ಬೆಳೆಯಿರಿ: ಮೈಸೂರು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ಕೆ ಆರ್ ಎಸ್, ಕಬಿನಿ ಹಾಗೂ ಚಿಕ್ಕ ಡ್ಯಾಮ್‌ಗಳಾದ ನುಗು ಮತ್ತು ತಾರಕ ಜಲಾಶಯಗಳಿಂದ ಕುಡಿಯುವ ನೀರನ್ನು ಬಳಕೆ ಮಾಡಲಾಗುತ್ತಿದೆ. ರೈತರ ಬೆಳೆಗಳಿಗೆ ನೀರನ್ನು ಈಗಿನ ಪರಿಸ್ಥಿತಿಯಲ್ಲಿ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತರು ರಾಗಿ ಜೋಳ ತರಹದ ಬೆಳೆಗಳನ್ನು ಬೆಳೆಯುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಪ್ರಕಾಶ್, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ ಮಂಜುನಾಥ್, ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಉಡುಪಿ ಜಿಲ್ಲಾಧಿಕಾರಿ ವಿಧ್ಯಾಕುಮಾರಿ ಮತ್ತಿತರರು ಹಾಜರಿದ್ದರು.

ಇದನ್ನೂಓದಿ: ಚಲುವರಾಯಸ್ವಾಮಿ ಮಂತ್ರಿಯಾಗಿದ್ದನ್ನು ಕುಮಾರಸ್ವಾಮಿ ಸಹಿಸುತ್ತಿಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.