ETV Bharat / state

ಸಿದ್ದರಾಮಯ್ಯ ವಿರುದ್ದ ಭೂ ಹಗರಣ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆಗ್ರಹ - ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಭೂ ಹಗರಣ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆರ್ ಟಿ ಐ ಕಾರ್ಯಕರ್ತ ಗಂಗರಾಜು ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು.

ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Jul 28, 2019, 4:41 PM IST

ಮೈಸೂರು : ಹಿರಿಯ ಪೊಲೀಸ್ ಅಧಿಕಾರಿ ವಿರುದ್ದ ನಿಯಮಾನುಸಾರ ವಿಚಾರಣೆ ನಡೆಸಲು ಸೂಕ್ತವಾಗಿರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರದ ಮೂಲಕ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಭೂ ಹಗರಣ ಪ್ರಕರಣ ದಾಖಲಿಸಿಕೊಂಡು ಲಕ್ಷ್ಮೀಪುರಂ ಠಾಣೆ ಪೊಲೀಸರು ತನಿಖೆ ನಡೆಸುತ್ತಿರುವ ವಿಚಾರದ ಬಗ್ಗೆ ಅನುಮಾನಗೊಂಡ ದೂರುದಾರ ಆರ್ ಟಿ ಐ ಕಾರ್ಯಕರ್ತ ಗಂಗರಾಜು ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಗೆ ಪತ್ರ ಬರೆದು ಸಿಬಿಐ ಅಥವಾ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದರು.

ಮನವಿ ಪುರಸ್ಕರಿಸಿದ ಡಿಜಿ ಮತ್ತು ಐಜಿ ಅವರು ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಸೂಚನೆ ನೀಡಿದ್ದರು. ಡಿಜಿ ಅವರ ಪತ್ರಕ್ಕೆ ಉತ್ತರಿಸಿದ ಆಯುಕ್ತರು, ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಾಗಾಗಿ ಯಾವುದೇ ಉನ್ನತ ಮಟ್ಟದ ತನಿಖೆಯ ಅವಶ್ಯಕತೆಯಿಲ್ಲ ಎಂದು ಉತ್ತರ ನೀಡಿದ್ದರು.

ಈ ಉತ್ತರದಿಂದ ಅಸಮಾಧಾನಗೊಂಡ ದೂರುದಾರ ಗಂಗರಾಜು, ಸುಬ್ರಹ್ಮಣ್ಶೇಶ್ವರ ರಾವ್, ಸರಕಾರದ ಅಧಿಕಾರ ದುರುಪಯೋಗ ಮಾಡಿ ಸುಳ್ಳು ಮಾಹಿತಿ ನೀಡಿ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಆರೋಪಿಸಿ ಪ್ರಕರಣದ ಎಲ್ಲಾ ದಾಖಲೆಗಳೊಂದಿಗೆ ಲಗತ್ತಿಸಿ ರಾಜ್ಯ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದರು. ಸಿಎಸ್ ಈ ದೂರನ್ನು ಗೃಹ ಕಾರ್ಯದರ್ಶಿಗೆ ರವಾನಿಸಿದ್ದರು. ಗೃಹ ಕಾರ್ಯದರ್ಶಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಕಳುಹಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಡಿಜಿ ಮತ್ತು ಐಜಿ ಅವರು ಈಗಿನ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಅವರಿಗೆ ಪತ್ರ ಬರೆದಿದ್ದರು. ಡಿಜಿ ಅವರ ಪತ್ರಕ್ಕೆ ಉತ್ತರ ನೀಡಿದ್ದು, ಹಿಂದಿನ ಪೊಲೀಸ್ ಆಯುಕ್ತರಾಗಿದ್ದ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರು ಜೇಷ್ಠತೆಯಲ್ಲಿ ನನಗಿಂತ ಹಿರಿಯ ಅಧಿಕಾರಿಯಾಗಿದ್ದು, ನಾನು ಅವರ ವಿರುದ್ದ ವಿಚಾರಣೆ ಮಾಡುವುದು ನಿಯಮಾನುಸಾರ ಸೂಕ್ತವಲ್ಲ. ಆದ್ದರಿಂದ ಸದರಿ ಅರ್ಜಿಯನ್ನು ಅವರಿಗಿಂತ ಉನ್ನತ ಶ್ರೇಣಿಯ ಅಧಿಕಾರಿಗಳಿಂದ ವಿಚಾರಣೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಹಿನಕಲ್‍ನಲ್ಲಿ ಅಕ್ರಮವಾಗಿ ನಿವೇಶನ ಖರೀದಿ ಮಾಡಿ ಮಾರಾಟ ಮಾಡಿದ್ದಾರೆ ಎಂಬುದರ ಬಗ್ಗೆ ದೂರುದಾರ ಗಂಗರಾಜು ನ್ಯಾಯಾಲಯದಲ್ಲಿ ದಾಖಲಿಸಿದ ದೂರಿನ ಮೇರೆಗೆ ಲಕ್ಷ್ಮೀಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರ ಒಪ್ಪದ ಕಾರಣ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು.

Intro:ಪತ್ರBody:ಮೈಸೂರು:ಹಿರಿಯ ಪೊಲೀಸ್ ಅಧಿಕಾರಿ ವಿರುದ್ದ  ನಿಯಮಾನುಸಾರ ವಿಚಾರಣೆ ನಡೆಸಲು ಸೂಕ್ತವಾಗಿರುವುದಿಲ್ಲ  ಎಂದು ನಗರ ಪೆÇ
ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ , ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರದ ಮೂಲಕ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಭೂ ಹಗರಣ ಸಂಬಂಧ  ಪ್ರಕರಣ ದಾಖಲಿಸಿಕೊಂಡು ಲಕ್ಷ್ಮೀಪುರಂ ಠಾಣೆ ಪೊಲೀಸರು ತನಿಖೆ ನಡೆಸುತ್ತಿರುವ ವಿಚಾರದ ಬಗ್ಗೆ ಅನುಮಾನಗೊಂಡ ದೂರುದಾರ ಆರ್ ಟಿಊ ಕಾರ್ಯಕರ್ತ ಗಂಗರಾಜು ಅವರು ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಗೆ ಪತ್ರ ಬರೆದು ಸಿಬಿಐ ಅಥವಾ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಡಿಜಿ ಮತ್ತು ಐಜಿ ಅವರು ಈ ಬಗ್ಗೆ  ಅಭಿಪ್ರಾಯ ತಿಳಿಸುವಂತೆ ಮತ್ತೆ ನಗರ ಪೆÇಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಸೂಚನೆ ನೀಡಿದ್ದರು. ಡಿಜಿ ಅವರ ಪತ್ರಕ್ಕೆ ಉತ್ತರಿಸಿದ ಆಯುಕ್ತರು, ಆರೋಪದಲ್ಲಿ ಯಾವುದೇ ಹುರುಳಿಲ್ಲದಿರುವುದರಿಂದ ಯಾವುದೇ ಉನ್ನತ ಮಟ್ಟದ ತನಿಖೆಯ ಅವಶ್ಯಕತೆಯಿಲ್ಲ ಎಂದು ಉತ್ತರ ನೀಡಿದ್ದರು.
ಈ ಉತ್ತರದಿಂದ ಅಸಮಧಾನಗೊಂಡ ದೂರುದಾರ ಗಂಗರಾಜು ಅವರು, ಸುಬ್ರಹ್ಮಣ್ಯಶ್ವರರಾವ್ ಅವರು ಮೇಲಾಧಿಕಾರಿಗಳು ಮತ್ತು ಸರಕಾರಕ್ಕೆ ಅಧಿಕಾರ ದುರುಪಯೋಗಪಡಿಸಿಕೊಂಡು ಸುಳ್ಳು ಮಾಹಿತಿ ನೀಡಿ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಆರೋಪಿಸಿ ಪ್ರಕರಣದ ಎಲ್ಲಾ ದಾಖಲೆಗಳೊಂದಿಗೆ ಲಗತ್ತಿಸಿ ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು.  ಅವರು ಗೃಹ ಕಾರ್ಯದರ್ಶಿಗೆ ರವಾನಿಸಿದ್ದರು. ಗೃಹ ಕಾರ್ಯದರ್ಶಿ ರಾಜ್ಯ ಪೆÇಲೀಸ್ ಮಹಾ ನಿರ್ದೇಶಕರಿಗೆ ಕಳುಹಿಸಿದ್ದರು.  ಈ  ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಡಿಜಿ ಮತ್ತು ಐಜಿ ಅವರು ಈಗಿನ  ಮೈಸೂರು ನಗರ ಪೆÇಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಅವರಿಗೆ ಪತ್ರ ಬರೆದಿದ್ದರು.
ಡಿಜಿ ಅವರ ಪತ್ರಕ್ಕೆ  ನಗರ ಪೆÇಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ  ಉತ್ತರ ನೀಡಿದ್ದುಘಿ,  ಹಿಂದಿನ ಪೆÇಲೀಸ್ ಆಯುಕ್ತರಾಗಿದ್ದ  ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರು  ಜೇಷ್ಠತೆಯಲ್ಲಿ ನನಗಿಂತ  ಹಿರಿಯ ಅಧಿಕಾರಿಯಾಗಿದ್ದುಘಿ, ನಾನು ಅವರ ವಿರುದ್ದ ವಿಚಾರಣೆ ಮಾಡುವುದು ನಿಯಮನಾಸುರ ಸೂಕ್ತವಾಗಿರುವುದಿಲ್ಲಘಿ. ಆದ್ದರಿಂದ ಸದರಿ ಅರ್ಜಿಯನ್ನು ಅವರಿಗಿಂತ ಉನ್ನತ ಶ್ರೇಣಿಯ ಅಧಿಕಾರಿಗಳಿಂದ ವಿಚಾರಣೆ ನಡೆಸುವುದು ಸೂಕ್ತವಾಗಿದೆ ಎಂದು  ಅಭಿಪ್ರಾಯ ತಿಳಿಸಿದ್ದಾರೆ.
   ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಹಿನಕಲ್‍ನಲ್ಲಿ  ಅಕ್ರಮವಾಗಿ ನಿವೇಶನ ಖರೀದಿ ಮಾಡಿ ಮಾರಾಟ ಮಾಡಿದ್ದಾರೆ ಎಂಬುದರ ಬಗ್ಗೆ ದೂರುದಾರ ಗಂಗರಾಜು ಅವರು ನ್ಯಾಯಾಲಯದಲ್ಲಿ ದಾಖಲಿಸಿದ ದೂರಿನ ಮೇರೆಗೆ ಲಕ್ಷ್ಮೀಪುರಂ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ನ್ಯಾಯಾಲಯಕ್ಕೆ ಬಿ ರಿಪೆÇೀರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರ ಒಪ್ಪದ ಕಾರಣ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು.Conclusion:ಪತ್ರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.