ಮೈಸೂರು: ಸತತ ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯಲ್ಲಿ ಬಿರುಕು ಮತ್ತು ಭೂ ಕುಸಿತ ಉಂಟಾಗಿದೆ.
ಕಳೆದ ವರ್ಷ ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದ್ದು, ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ದುರಸ್ತಿ ಕಾರ್ಯ ಕೈಗೊಂಡಿದ್ದರು. ಕಳೆದ ವರ್ಷ ಭೂ ಕುಸಿತವಾದ ಸ್ಥಳದಿಂದ 500 ಮೀ ಅಂತರದಲ್ಲಿ ಇದೀಗ ಭೂಮಿ ಕುಸಿದಿದ್ದು, ನಂದಿ ಮಾರ್ಗದ ವಾಚ್ ಟವರ್ ಹತ್ತಿರ ರಸ್ತೆ ಬಿರುಕು ಬಿಟ್ಟಿದೆ.
ಇದನ್ನೂ ಓದಿ: ಕೊಡಗಿನಲ್ಲಿ ಭಾರೀ ಮಳೆ: ಹಲವೆಡೆ ಮುಂದುವರೆದ ಭೂ ಕುಸಿತ
ಕೆಲ ತಿಂಗಳಿನಿಂದ ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾಮುಂಡಿ ಬೆಟ್ಟದ ಹಲವು ಕಡೆ ಶೀತ ಹೆಚ್ಚಾಗಿದ್ದು, ಬಹುತೇಕ ಕಡೆ ಝರಿ ರೀತಿಯಲ್ಲಿ ನೀರು ಹರಿಯುತ್ತಿದೆ. ಇದರಿಂದ ಚಾಮುಂಡಿ ಬೆಟ್ಟದಲ್ಲಿ ರಸ್ತೆ ಕುಸಿತ ಉಂಟಾಗಿದೆ ಎಂದು ಹೇಳಲಾಗುತ್ತಿದೆ.