ಮೈಸೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿಗಳನ್ನು ಚಿರತೆ ತಿಂದು ಹಾಕಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯದ ಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಕಳೆದ 4 ದಿನಗಳಿಂದ 20 ಕುರಿಗಳನ್ನು ತಿಂದಿರುವ ಚಿರತೆ, ಇಬ್ಬರು ರೈತರ ಮೇಲೆ ದಾಳಿ ಮಾಡಿದೆ. ಇದೀಗ ಗ್ರಾಮದ ಕೆಂಪಮ್ಮ ಎಂಬ ವೃದ್ಧೆಗೆ ಸೇರಿದ 2 ಕುರಿಗಳನ್ನು ತಿಂದುಹಾಕಿದೆ.
ನರ ಹಂತಕ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಒತ್ತಾಯಿಸಿದ್ದಾರೆ. ಚಿರತೆ ಸೆರೆಹಿಡಿಯದೆ ಹೋದರೆ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಕುರಿ ಕಳೆದುಕೊಂಡಿರುವ ವೃದ್ಧೆ ಕೆಂಪಮ್ಮಗೆ ಸೂಕ್ತ ಪರಿಹಾರ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.