ಮೈಸೂರು: ಜಾನುವಾರಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ನಡೆದಿದೆ.
ತೆಂಕಲಕೊಪ್ಪಲು ಹಾಗೂ ಮೈದನಹಳ್ಳಿ ಸುತ್ತಮುತ್ತ ಚಿರತೆಯೊಂದು ಕುರಿ, ನಾಯಿಗಳ ಮೇಲೆ ದಾಳಿ ನಡೆಸಿ ಗ್ರಾಮದ ಜನರಲ್ಲಿ ಭಯ ಮೂಡಿಸಿತ್ತು ಹಾಗೂ ಸಾಕಷ್ಟು ಉಪಟಳವನ್ನು ನೀಡಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಚಿರತೆ ಸೆರೆಗಾಗಿ ಜಮೀನೊಂದರಲ್ಲಿ ಬೋನನ್ನು ಇರಿಸಿದ್ದರು.
ಸದ್ಯ ಚಿರತೆ ಬೋನಿಗೆ ಬಿದ್ದಿದೆ. ಈ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಗಿದೆ.