ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹುಣಸೂರು ಗ್ರಾಮದ ಹೊರವಲಯದಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.
ಕೆಲ ದಿನಗಳಿಂದ ಜಾನುವಾರಗಳನ್ನು ತಿಂದು ತೇಗುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಚಂದ್ರಶೇಖರ್ ಎಂಬುವರ ಜಮೀನಿನಲ್ಲಿ ಬೋನ್ ಇಡಲಾಗಿತ್ತು. ಆಹಾರ ಅರಸಿ ಬಂದ ಚಿರತೆ ಇಂದು ಬೋನಿಗೆ ಬಿದ್ದಿದೆ.
ಬೋನಿಗೆ ಬಿದ್ದಿದ್ದರೂ ಅದರ ಆಕ್ರೋಶ ಮಾತ್ರ ಕಡಿಮೆಯಾಗಿರಲಿಲ್ಲ. ಸೆರೆ ಸಿಕ್ಕಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವಲಯಕ್ಕೆ ಬಿಡಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.