ಮೈಸೂರು: ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ 4 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದಿನಿಂದ ಲಾಕ್ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.
ಪ್ರತಿದಿನ ಮೈಸೂರು ನಗರ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿನ ತೀವ್ರತೆ ಕಡಿಮೆ ಮಾಡಲು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಸ್ಥಳದಲ್ಲೆ ನಡೆಸಲು ಆದೇಶಿಸಲಾಗಿದೆ.
ಮೈಸೂರು ನಗರದ ನರಸಿಂಹರಾಜ, ಉದಯಗಿರಿ, ಲಷ್ಕರ್ ಹಾಗೂ ಮಂಡಿ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶದ ಎಂದು ಜುಲೈ17ರಿಂದ 24ರವರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ದಿನಗಳಲ್ಲಿ ಕೆಲವು ಅಗತ್ಯ ವಸ್ತುಗಳು, ದಿನಸಿ ಅಂಗಡಿಗಳು, ವೈದ್ಯಕೀಯ ಸೇವೆ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿ ಸೇವೆಗಳು, ಬ್ಯಾಂಕ್ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.