ಮೈಸೂರು: ನಾಳೆ ಈ ವರ್ಷದ ಕೊನೆಯ ಚಂದ್ರ ಗ್ರಹಣ ಘಟಿಸಲಿದೆ. ಈ ಹಿನ್ನೆಲೆಯಲ್ಲಿ ನಾಡ ಅಧಿದೇವತೆಯಾದ ಶ್ರೀ ಚಾಮುಂಡೇಶ್ವರಿ ದೇವಾಲಯ ಸಂಜೆ 6 ಗಂಟೆಯ ನಂತರ ಬಂದ್ ಆಗಲಿದೆ ಎಂದು ಚಾಮುಂಡಿ ಬೆಟ್ಟದ ಆಡಳಿತ ಮಂಡಳಿಯ ನಿರ್ವಾಹಕ ಅಧಿಕಾರಿ ಸಿ.ಜೆ.ಕೃಷ್ಣ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ 7.30 ಕ್ಕೆ ಮತ್ತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಭಕ್ತರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಆದರೆ ನವರಾತ್ರಿಯ ಕೊನೆಯ ಕಾರ್ಯಕ್ರಮ ಚಾಮುಂಡೇಶ್ವರಿ ತಾಯಿಯ ತೆಪ್ಪೋತ್ಸವ ಕಾರ್ಯಕ್ರಮ ಚಾಮುಂಡಿ ಬೆಟ್ಟದ ದೇವಿಕೆರೆಯಲ್ಲಿ ಶನಿವಾರ ಸಂಜೆ 5 ಗಂಟೆಗೆ ಸಾಂಪ್ರದಾಯಿಕವಾಗಿ ನಡೆಯಲಿದೆ. ಬಳಿಕ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ: ಮೈಸೂರು ದಸರಾ ದೀಪಾಲಂಕಾರ ಅವಧಿ ವಿಸ್ತರಣೆ: ಹಲವು ರಸ್ತೆಗಳಲ್ಲಿ ಏಕಮುಖ ಸಂಚಾರ