ETV Bharat / state

ಸಿದ್ದರಾಮಯ್ಯಗೆ ಇನ್ನೂ ಬುದ್ಧಿ ಬಂದಿಲ್ಲ: ಸಂಸದ ವಿ. ಶ್ರೀನಿವಾಸ್ ಪ್ರಸಾದ್ - MP V. Srinivasa

ವಿರೋಧ ಪಕ್ಷದಲ್ಲಿ ಇದ್ದುಕೊಂಡು ಲೆಕ್ಕ ಕೇಳೋದಲ್ಲ. ‌ಮೊದಲು ಜನರ ರಕ್ಷಣೆಗೆ ಬೇಕಾದ ಅಗತ್ಯ ಮಾರ್ಗದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಸಂಸದ ವಿ. ಶ್ರೀನಿವಾಸ ಪ್ರಸಾದ್​​​ ವಾಗ್ದಾಳಿ ನಡೆಸಿದ್ದಾರೆ.

M P Srinivas Prasad
ಸಂಸದ ವಿ.ಶ್ರೀನಿವಾಸ್ ಪ್ರಸಾದ್
author img

By

Published : Jul 13, 2020, 7:36 PM IST

ಮೈಸೂರು: ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ವಾಶ್ ಔಟ್ ಮಾಡಿದ್ದಾರೆ. ಆದರೂ ಅವರಿಗೆ ಬುದ್ಧಿ ಬಂದಿಲ್ಲ ಅನಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್​​​ತಿರುಗೇಟು ನೀಡಿದ್ದಾರೆ.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ವಾಶ್ ಔಟ್ ಮಾಡಿದ್ದಾರೆ. ಆದರೂ ಅವರಿಗೆ ಇನ್ನು ಬುದ್ಧಿ ಬಂದಿಲ್ಲ ಅನಿಸುತ್ತದೆ. ಪಕ್ಷ ನಾಯಕರಾದವರು ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಉತ್ತಮ ಸಲಹೆ ಕೊಡಲಿ ಎಂದು ಕುಟುಕಿದರು.

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಸಾಕಷ್ಟು ಹೋರಾಟ ಮಾಡಿ, ಜನರ ಪ್ರಾಣ ರಕ್ಷಣೆಗೆ ಮುಂದಾಗಿದೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಲೆಕ್ಕ ಕೇಳೋದಲ್ಲ, ‌ಮೊದಲು ಜನರ ರಕ್ಷಣೆಗೆ ಬೇಕಾದ ಅಗತ್ಯ ಮಾರ್ಗದರ್ಶನ ಮಾಡಲಿ ಎಂದರು.

ಮುಂಬೈಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮನೆಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.