ಟಿ.ನರಸೀಪುರ (ಮೈಸೂರು) : ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಬೆನಕನಹಳ್ಳಿ ಮಠದ ಪೀಠಾಧ್ಯಕ್ಷ ಮಹದೇವಸ್ವಾಮಿ (47) ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಠದ ಆವರಣದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.
ಸ್ವಾಮೀಜಿ ಸಾವಿನ ಸುತ್ತ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.