ETV Bharat / state

ನಂಜನಗೂಡಿನ ಮಹಾದೇವಮ್ಮ ದೇವಸ್ಥಾನ ತೆರವು: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರಿನಲ್ಲಿ ದೇವಾಲಯ ತೆರವು ವಿಚಾರವಾಗಿ ಹಿಂದೂಪರ ಸಂಘಟನೆಗಳು ಜಿಲ್ಲಾಡಳಿತದ ನಿರ್ಧಾರ ವಿರೋಧಿಸಿ ಪ್ರತಿಭಟನೆ ನಡೆಸಿವೆ.

Mahadevamma temple demolished by administration leads protest
ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
author img

By

Published : Sep 12, 2021, 6:20 PM IST

ಮೈಸೂರು: ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಮಹಾದೇವಮ್ಮ ದೇವಸ್ಥಾನ ತೆರವು ಮಾಡಿರುವುದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಸದಸ್ಯರು ಅಗ್ರಹಾರ ವೃತ್ತದ ನೂರೊಂದು ಗಣಪತಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾಗಿ ಪರಿಶೀಲಿಸದ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ದಿಕ್ಕುತಪ್ಪಿಸಿ, ರಸ್ತೆ ಬದಿಯಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸುವ ಮೂಲಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.

ನಂಜನಗೂಡಿನ ಮಹಾದೇವಮ್ಮ ದೇವಸ್ಥಾನ ತೆರವು- ಪ್ರತಿಭಟನೆ

ದೇವಸ್ಥಾನಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಸ್ಥಳೀಯರಿಂದ ಮಾಹಿತಿ ಪಡೆಯಬೇಕು. ಏಕಾಏಕಿ ದೇವಸ್ಥಾನ ಒಡೆದು ಹಾಕಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜಕೀಯ ಕಾರ್ಯದರ್ಶಿ, ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ಕೊಟ್ರೆ ಒಪ್ಪೋದಿಲ್ಲ: ಅಭಯ್ ಪಾಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.