ಮೈಸೂರು : ಫುಟ್ಪಾತ್ ಅತಿಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದ ಸ್ಥಳವನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿಯಿಂದ ತೆರವುಗೊಳಿಸಿದ್ದಾರೆ. ನಗರದ ಪ್ರಮುಖ ವ್ಯಾಪಾರಿ ಸ್ಥಳಗಳಾದ ಮೀನಾ ಬಜಾರ್ ರಸ್ತೆ ಮತ್ತು ಕೆ ಟಿ ರಸ್ತೆಗಳಲ್ಲಿ ಫುಟ್ಪಾತ್ ಜಾಗ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿತ್ತು.
ಈ ಕುರಿತು ಹಲವು ಬಾರಿ ಪಾಲಿಕೆ ಅಧಿಕಾರಿಗಳು ಫುಟ್ಪಾತ್ ತೆರವುಗೊಳಿಸಿ ಎಂದು ಹೇಳಿದ್ದರೂ ತಲೆಕೆಡಿಸಿಕೊಳ್ಳದ ವ್ಯಾಪಾರಸ್ಥರಿಗೆ ಇಂದು ಪಾಲಿಕೆ ಅಧಿಕಾರಿಗಳು ಜೆಸಿಬಿ ನೆರವಿನಿಂದ ತೆರವುಗೊಳಿಸಿದರು. ಅಂಗಡಿ ತೆರವಿನ ವೇಳೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.