ಮೈಸೂರು:ಮಹಾರಾಜ ಕಾಲೇಜಿನ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಲೇಜಿನ ಎಂಎಸ್ಸಿ ಕ್ರಿಮಿನಾಲಜಿ ವಿಭಾಗದ ತರಗತಿಯಲ್ಲಿ ಈ ದುರ್ಘಟನೆ ನಡೆದಿದೆ. ಛಾವಣಿ ಮೇಲ್ಭಾಗ ಶಿಥಿಲಗೊಂಡಿದ್ದರಿಂದ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೆಳ ಭಾಗದಲ್ಲಿ ಛಾವಣಿ ಕುಸಿದಿದೆ. ಕಾಲೇಜಿನ ಕೊಠಡಿಯಲ್ಲಿ ಆಂತರಿಕ ಪರೀಕ್ಷೆಗೆ ಹಾಜರಾಗಿದ್ದ ವಿಶಾಲ್ , ಯಶ್ವಂತ್ , ಸಲೀಂ ಎಂಬ ಮೂವರು ವಿದ್ಯಾರ್ಥಿಗಳ ಮೇಲೆ ಛಾವಣಿ ಬಿದ್ದಿದ್ದು ಇವರು ಗಾಯಗೊಂಡಿದ್ದಾರೆ. ತಕ್ಷಣ ಮೂವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.