ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಂಪನ್ನಗೊಂಡ ಬಳಿಕ ಸಂಪ್ರದಾಯದಂತೆ ಇಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9:40 ರಿಂದ 10:05 ರೊಳಗಿನ ಶುಭ ಮುಹೂರ್ತದಲ್ಲಿ ಸರಳ ರೀತಿಯಲ್ಲಿ ರಥೋತ್ಸವ ನಡೆದಿದೆ.
ಯದುವೀರ್ ಅವರು ಚಾಮುಂಡೇಶ್ವರಿ ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಮಂಗಳ ವಾದ್ಯ ಮೇಳಗಳೊಂದಿಗೆ ರಥ ದೇವಾಲಯದ ಪ್ರಾಂಗಣದಲ್ಲಿ ಒಂದು ಸುತ್ತು ಪ್ರದಕ್ಷಿಣೆ ಹಾಕಿದೆ. ಮಧ್ಯಾಹ್ನ 12 ಗಂಟೆಯವರೆಗೂ ಬೆಟ್ಟಕ್ಕೆ ಭಕ್ತರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿದೆ.